alex Certify
ಕನ್ನಡ ದುನಿಯಾ       Mobile App
       

Kannada Duniya

ಆಸ್ತಿಗಾಗಿ ಅಣ್ಣನಿಂದಾಯ್ತು ಘೋರ ಕೃತ್ಯ

belagavi-dd

ಬೆಳಗಾವಿ: ಆಸ್ತಿಗಾಗಿ ಅಣ್ಣ ತಮ್ಮಂದಿರ ನಡುವೆ ಜಗಳವಾಗಿ, ಇಬ್ಬರನ್ನು ಭೀಕರವಾಗಿ ಕೊಲೆ ಮಾಡಿದ ಘಟನೆ ಬೆಳಗಾವಿಯ ಮಾಳ ಮಾರುತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಆಲರವಾಡ ಗಾಂಧಿನಗರದಲ್ಲಿ ಅಣ್ಣನೇ ತಮ್ಮಂದಿರಿಬ್ಬರನ್ನು ಬರ್ಬರವಾಗಿ ಹತ್ಯೆ ಮಾಡಿದ್ದಾನೆ. ಮೊಹಮ್ಮದ್ ಮುಲ್ಲಾ, ಗೌಸ್ ಮುಲ್ಲಾ ಕೊಲೆಯಾದವರು.

ಆಸ್ತಿ ವಿಚಾರಕ್ಕೆ ಜಗಳವಾಗಿದ್ದು, ಅವರ ಹಿರಿಯ ಸಹೋದರ ರಸೂಲ್ ಮುಲ್ಲಾ ತಮ್ಮಂದಿರನ್ನು ಅಟ್ಟಾಡಿಸಿಕೊಂಡು ಹೋಗಿ ಮಾರಕಾಸ್ತ್ರಗಳಿಂದ ಥಳಿಸಿ ಹತ್ಯೆ ಮಾಡಿದ್ದಾನೆ ಎನ್ನಲಾಗಿದೆ.

ರಸೂಲ್ ಕೂಡ ಗಾಯಗೊಂಡು ಆಸ್ಪತ್ರೆ ಸೇರಿದ್ದಾನೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...