alex Certify
ಕನ್ನಡ ದುನಿಯಾ       Mobile App
       

Kannada Duniya

ಮರಕ್ಕೆ ಕಾರು ಡಿಕ್ಕಿಯಾಗಿ ಮೂವರ ಸಾವು

ಬೆಳಗಾವಿ: ಮರಕ್ಕೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ ಘಟನೆ ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲ್ಲೂಕಿನ ನಿಪ್ಪಾಣಿ ಸಮೀಪ ನಡೆದಿದೆ.

ಮುಂಬೈ ಮೂಲದ ಸಾವಿತ್ರಿ ಗುಪ್ತಾ(47), ಅವರ ಪುತ್ರಿಯರಾದ ಶೋಭಾ ಗುಪ್ತಾ(27), ಆರತಿ ಗುಪ್ತಾ(21) ಮೃತಪಟ್ಟವರೆಂದು ಗುರುತಿಸಲಾಗಿದೆ.

ಚಾಲಕ ಸೂರ್ಯ ಸಾಹು ಹಾಗೂ ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ನಿಪ್ಪಾಣಿಯ ಸ್ತವನಿಧಿ ಘಾಟ್ ಬಳಿ ರಾಷ್ಟ್ರೀಯ ಹೆದ್ದಾರಿ 4 ರಲ್ಲಿ ಸಾಗುತ್ತಿದ್ದ ಕಾರು, ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.

ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇವರೆಲ್ಲಾ ಗೋವಾದಲ್ಲಿ ಹೊಸ ವರ್ಷಾಚರಣೆ ಮುಗಿಸಿಕೊಂಡು ಊರಿಗೆ ವಾಪಸ್ ಆಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ನಿಪ್ಪಾಣಿ ಶಹರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...