alex Certify
ಕನ್ನಡ ದುನಿಯಾ       Mobile App
       

Kannada Duniya

ಹುಷಾರ್! ಪೊಲೀಸರನ್ನು ಮುಟ್ಟಿದ್ರೆ ಗುಂಡೇಟು ಗ್ಯಾರಂಟಿ

ಬೆಳಗಾವಿ: ಪೊಲೀಸರ ಮೇಲೆ ಹಲ್ಲೆ ಮಾಡಿದ್ರೆ ಗುಂಡು ಹಾರಿಸುವಂತೆ ಗೃಹ ಸಚಿವರಾದ ರಾಮಲಿಂಗಾ ರೆಡ್ಡಿ ಸೂಚಿಸಿದ್ದಾರೆ.

ಬೆಳಗಾವಿ ಜಿಲ್ಲೆ ಸಾಲಹಳ್ಳಿಯಲ್ಲಿ ಮಾತನಾಡಿದ ಅವರು, ಪೊಲೀಸರಿಗೆ ಗನ್ ಕೊಟ್ಟಿರುವುದೇ ಆತ್ಮರಕ್ಷಣೆಗಾಗಿ. ಸಾರ್ವಜನಿಕ ಆಸ್ತಿಗೆ ಹಾನಿ, ದೊಡ್ಡ ಗಲಾಟೆ ಆದ ಸಂದರ್ಭದಲ್ಲಿ ಗನ್ ಬಳಸುವಂತೆ ಸೂಚಿಸಲಾಗಿದೆ ಎಂದು ಹೇಳಿದ್ದಾರೆ.

ಪೊಲೀಸ್ ಆಯುಕ್ತರು ಅಧಿಕಾರಿಗಳ ಸಭೆ ನಡೆಸಿ ಈಗಾಗಲೇ ಸೂಚನೆ ನೀಡಿದ್ದಾರೆ. ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ದುಷ್ಕರ್ಮಿಗಳ ವಿರುದ್ಧ, ಕಾನೂನು ಕೈಗೆತ್ತಿಕೊಳ್ಳುವ ಕ್ರಿಮಿನಲ್ ಗಳ ವಿರುದ್ಧ ಗನ್ ಬಳಸಲು ಸೂಚಿಸಿದ್ದಾರೆ ಎಂದು ರಾಮಲಿಂಗಾ ರೆಡ್ಡಿ ಮಾಹಿತಿ ನೀಡಿದ್ದಾರೆ.

ಸೂಕ್ಷ್ಮ ಪ್ರದೇಶದಲ್ಲಿ ಕಾರ್ಯ ನಿರ್ವಹಿಸುವಾಗ, ಪರಿಸ್ಥಿತಿ ವಿಕೋಪಕ್ಕೆ ತಿರುಗಿದಾಗ ಸಂದರ್ಭಕ್ಕೆ ತಕ್ಕಂತೆ ಗನ್ ಬಳಸಲು ತಿಳಿಸಲಾಗಿದೆ ಎಂದು ಹೇಳಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...