alex Certify
ಕನ್ನಡ ದುನಿಯಾ       Mobile App
       

Kannada Duniya

ನ. 21 ರಿಂದ ಡಿ. 2 ರವರೆಗೆ ಚಳಿಗಾಲದ ಅಧಿವೇಶನ

vidhana-soudhaರಾಜ್ಯ ವಿಧಾನ ಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ 21 ರಿಂದ ಡಿಸೆಂಬರ್ 2 ರವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ 10 ದಿನಗಳ ಕಾಲ ನಡೆಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.

ಸಚಿವ ಸಂಪುಟ ಸಭೆಯ ಬಳಿಕ ಈ ವಿಷಯವನ್ನ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ. ಬಿ. ಜಯಚಂದ್ರ ಪ್ರಕಟಿಸಿದ್ದಾರೆ.

ಸಚಿವ ಸಂಪುಟ ಸಭೆಯಲ್ಲಿ ಕೈಗೊಳ್ಳಲಾದ ಕೆಲ ಮಹತ್ವದ ನಿರ್ಣಯಗಳ ಕುರಿತೂ ಜಯಚಂದ್ರ ಮಾಹಿತಿ ನೀಡಿದ್ದು, ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ 28 ವಿಜ್ಞಾನಿಗಳಿಗೆ ವಿಶ್ವವಿದ್ಯಾನಿಲಯದ ಬೋಧಕ ಹುದ್ದೆಗಳಿಗೆ ಸರಿಸಮನಾಗಿ ವಿಶ್ವವಿದ್ಯಾಲಯದ ಅನುದಾನ ಆಯೋಗದ ವೇತನ ಶ್ರೇಣಿ ನೀಡಲು ಸಂಪುಟ ಒಪ್ಪಿಗೆ ನೀಡಿದೆ ಎಂದು ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...