alex Certify
ಕನ್ನಡ ದುನಿಯಾ       Mobile App
       

Kannada Duniya

ಚಳಿಗಾಲದ ಅಧಿವೇಶನಕ್ಕೆ ಸಜ್ಜಾದ ಬೆಳಗಾವಿ

ಬೆಳಗಾವಿ: ವಿಧಾನಮಂಡಲ ಉಭಯ ಸದನಗಳ ಚಳಿಗಾಲದ ಅಧಿವೇಶನ ಇಂದಿನಿಂದ ಬೆಳಗಾವಿಯ ಸುವರ್ಣಸೌಧದಲ್ಲಿ ಆರಂಭವಾಗಲಿದೆ. ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಕಾವೇರಿದ ಚರ್ಚೆಗೆ ವೇದಿಕೆಯಾಗಲಿದೆ.

ಸಚಿವರ ಮನೆ ಮೇಲೆ ಐ.ಟಿ. ದಾಳಿ, ಡಿ.ವೈ.ಎಸ್.ಪಿ. ಗಣಪತಿ ಆತ್ಮಹತ್ಯೆ ಪ್ರಕರಣ, ಟಿಪ್ಪು ಜಯಂತಿ, ಬಿ.ಜೆ.ಪಿ. ಆಡಳಿತದಲ್ಲಿ ನಡೆದಿದೆ ಎನ್ನಲಾದ ವಿದ್ಯುತ್ ಖರೀದಿ ಹಗರಣ ಮೊದಲಾದ ವಿಷಯಗಳು ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ಕಾವೇರಿದ ಚರ್ಚೆಗೆ ಕಾರಣವಾಗಲಿವೆ.

ಅಧಿವೇಶನದಲ್ಲಿ ಕರ್ನಾಟಕ ಧನ ವಿನಿಯೋಗ ವಿಧೇಯಕ ಸೇರಿದಂತೆ ಹಲವು ವಿಧೇಯಕಗಳನ್ನು ಮಂಡಿಸಲಾಗುವುದು.

ಖಾಸಗಿ ಆಸ್ಪತ್ರೆ ವೈದ್ಯರು ಕರ್ನಾಟಕ ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ಬೆಳಗಾವಿ ಚಲೋ ನಡೆಸಲಿದ್ದಾರೆ. ಇದರೊಂದಿಗೆ ಹಲವು ಸಂಘ, ಸಮುದಾಯಗಳಿಂದಲೂ ಬೆಳಗಾವಿ ಅಧಿವೇಶನದ ವೇಳೆ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...