alex Certify
ಕನ್ನಡ ದುನಿಯಾ       Mobile App
       

Kannada Duniya

ಹಾವಿನೊಂದಿಗೇ ಆಸ್ಪತ್ರೆಗೆ ಬಂದ್ರೂ ಬದುಕಲಿಲ್ಲ

havu-belgav

ಬೆಳಗಾವಿ: ಮಲಗಿದ್ದ ಸಂದರ್ಭದಲ್ಲಿ ಹಾವು ಕಚ್ಚಿ ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ಬೆಳಗಾವಿ ಜಿಲ್ಲೆ ಸವದತ್ತಿ ತಾಲ್ಲೂಕಿನ ಓಬಲದಿನ್ನಿ ಗ್ರಾಮದಲ್ಲಿ ನಡೆದಿದೆ.

50 ವರ್ಷದ ಲಕ್ಷ್ಮಣ ಮೃತಪಟ್ಟವರು. ಮನೆಯಲ್ಲಿ ಮಲಗಿದ್ದ ಸಂದರ್ಭದಲ್ಲಿ ಅವರಿಗೆ ಹಾವು ಕಚ್ಚಿದೆ. ತಮಗೆ ಹಾವು ಕಚ್ಚಿದ್ದು ಅವರಿಗೆ ಗೊತ್ತಾಗಿದೆ.

ಕೂಡಲೇ ಹಾಸಿಗೆಯಲ್ಲಿದ್ದ ಹಾವನ್ನು ಪ್ಲಾಸ್ಟಿಕ್ ಕವರ್ ನಲ್ಲಿ ಹಾಕಿಕೊಂಡು ಬೆಳಗಾವಿ ಆಸ್ಪತ್ರೆಗೆ ಬಂದಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ಲಕ್ಷ್ಮಣ ಮೃತಪಟ್ಟಿದ್ದಾರೆ.

ಅವರು ಪ್ಲಾಸ್ಟಿಕ್ ಚೀಲದಲ್ಲಿ ತಂದಿದ್ದ ಹಾವು ಕೂಡ ಸಾವನ್ನಪ್ಪಿದೆ. ಸಂಬಂಧಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...