alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಘಾತದಲ್ಲಿ ದಂಪತಿ, ಪುತ್ರ ಸಾವು: ಉದ್ರಿಕ್ತರಿಂದ ಕಾರಿಗೆ ಬೆಂಕಿ

ಬಳ್ಳಾರಿ: ಬಳ್ಳಾರಿ ಹೊರವಲಯದ ಅಲ್ಲೀಪುರ ಬಳಿ ಕಾರು ಡಿಕ್ಕಿಯಾಗಿ ಬೈಕ್ ನಲ್ಲಿ ಸಂಚರಿಸುತ್ತಿದ್ದ ದಂಪತಿ ಹಾಗೂ ಪುತ್ರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದರಿಂದ ಆಕ್ರೋಶಗೊಂಡ ಸ್ಥಳೀಯರು ಅಪಘಾತವೆಸಗಿದ ಕಾರಿಗೆ ಬೆಂಕಿ ಹಚ್ಚಿದ್ದಾರೆ.

ಖಾಸಗಿ ಆಸ್ಪತ್ರೆಯೊಂದರಲ್ಲಿ ಕೆಲಸ ಮಾಡುತ್ತಿದ್ದ ಶ್ರೀನಿವಾಸ್, ಅವರ ಪತ್ನಿ ವೀಣಾ ಹಾಗೂ ಪುತ್ರ ಸಂತೋಷ್ ಮೃತಪಟ್ಟವರು. ಅತಿವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದು ಮೂವರು ಸಾವನ್ನಪ್ಪಿದ್ದಾರೆ. ಕಾರಿನಲ್ಲಿದ್ದ ಮೂವರಲ್ಲಿ ಇಬ್ಬರು ಪರಾರಿಯಾಗಿದ್ದಾರೆ.

ಸ್ಥಳೀಯರು ಓರ್ವನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಕಾರಿಗೆ ಬೆಂಕಿ ಹಚ್ಚಿ ಆಕ್ರೋಶ ವ್ಯಕ್ತಪಡಿಸಿದ್ದು, ಬಳ್ಳಾರಿ ಸಂಚಾರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...