alex Certify
ಕನ್ನಡ ದುನಿಯಾ       Mobile App
       

Kannada Duniya

ತಡೆಗೋಡೆಗೆ ಕಾರು ಡಿಕ್ಕಿಯಾಗಿ ಒಂದೇ ಕುಟುಂಬದ ನಾಲ್ವರು ಸಾವು

ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಸೋಮಸಮುದ್ರ ಬಳಿ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ನಾಲ್ವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಬೀದರ್ ಜಿಲ್ಲೆ ಭಾಲ್ಕಿ ತಾಲ್ಲೂಕಿನ ವೈದ್ಯ ಸಂತೋಷ್, ಅವರ ಪತ್ನಿ ಅರ್ಚನಾ, ಪುತ್ರಿ ಲಕ್ಷ್ಮಿ ಹಾಗೂ ಸಂಬಂಧಿ ಸಿದ್ಧರಾಮಪ್ಪ ಮೃತಪಟ್ಟವರೆಂದು ಗುರುತಿಸಲಾಗಿದೆ. ಕಾರಿನಲ್ಲಿದ್ದ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ವಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ.

ಅತಿವೇಗವಾಗಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದಿದ್ದು, ಅಪಘಾತದ ರಭಸಕ್ಕೆ ಕಾರಿನ ಅರ್ಧ ಭಾಗ ಜಖಂಗೊಂಡಿದೆ. ಸಂತೋಷ್ ಅವರೇ ಕಾರು ಚಾಲನೆ ಮಾಡುತ್ತಿದ್ದರೆನ್ನಲಾಗಿದೆ.

ಸ್ಥಳಕ್ಕೆ ಸ್ಥಳೀಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಅಪಘಾತದಿಂದಾಗಿ ಕೆಲಕಾಲ ಸಂಚಾರಕ್ಕೆ ತೊಂದರೆಯಾಗಿದ್ದು, ಅಪಘಾತಕ್ಕೀಡಾದ ವಾಹನ ತೆರವುಗೊಳಿಸಿದ ನಂತರ ಸಂಚಾರ ವ್ಯವಸ್ಥೆ ಸರಿಯಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...