alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ – ಲಾರಿ ಡಿಕ್ಕಿಯಾಗಿ ನಾಲ್ವರು ಸಾವು

ಬಳ್ಳಾರಿ: ವ್ಯಾಗನರ್ ಕಾರ್ ಹಾಗೂ ಲಾರಿ ಮುಖಾಮುಖಿ ಡಿಕ್ಕಿಯಾಗಿ, ನಾಲ್ವರು ಸಾವು ಕಂಡ ಘಟನೆ ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಪಿ.ಕೆ. ಹಳ್ಳಿಯಲ್ಲಿ ನಡೆದಿದೆ.

ಕಾರ್ ಚಾಲಕ ಶ್ರೀನಿವಾಸ್, ವೆಂಕಟಮ್ಮ, ನಳಿನಿ ಹಾಗೂ ಮತ್ತೊಬ್ಬ ಮಹಿಳೆ ಮೃತಪಟ್ಟವರೆಂದು ಗುರುತಿಸಲಾಗಿದೆ. ಸಂಬಂಧಿಕರೊಬ್ಬರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಚಿತ್ರದುರ್ಗದ ಹಿರಿಯೂರಿನಿಂದ ಹೊಸಪೇಟೆಗೆ ತೆರಳುತ್ತಿದ್ದರು.

ಲಾರಿ ಚಾಲಕನ ಅತಿವೇಗ ಮತ್ತು ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣವಾಗಿದೆ. ಅಪಘಾತದಲ್ಲಿ ಇಬ್ಬರು ಗಾಯಗೊಂಡಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ.

ಸ್ಥಳಕ್ಕೆ ಗಾದಿಗನೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...