alex Certify
ಕನ್ನಡ ದುನಿಯಾ       Mobile App
       

Kannada Duniya

ಕಾಣೆಯಾಗಿದ್ದ ಮೂವರು ಬಾಲಕರು ಶವವಾಗಿ ಪತ್ತೆ

kere-e

ಬಳ್ಳಾರಿ: ನಾಪತ್ತೆಯಾಗಿದ್ದ ಮೂವರು ಬಾಲಕರು ಬಳ್ಳಾರಿ ಜಿಲ್ಲೆ ಸಂಡೂರು ತಾಲ್ಲೂಕಿನ ಬಂಡ್ರಿ ಗ್ರಾಮದ ಕೆರೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

ಮಾರುತಿ(10), ಮಹಮ್ಮದ್ ಸುಬಾನ್(7), ಗುರುರಾಜ್(9) ಮೃತಪಟ್ಟ ಬಾಲಕರು. ಜೂನ್ 4 ರಂದು ಸಂಜೆಯಿಂದ ಮೂವರೂ ನಾಪತ್ತೆಯಾಗಿದ್ದು, ಪೋಷಕರು, ಸ್ಥಳೀಯರು ಹುಡುಕಾಟ ನಡೆಸಿದ್ದರಾದರೂ, ಅವರ ಸುಳಿವು ಸಿಕ್ಕಿರಲಿಲ್ಲ.

ಇಂದು ಬೆಳಿಗ್ಗೆ ಗ್ರಾಮದ ಕೆರೆಯಲ್ಲಿ ಬಾಲಕರ ಶವಗಳು ಕಂಡು ಬಂದಿದ್ದು, ಅವುಗಳನ್ನು ಹೊರತೆಗೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.

ಕೂಡ್ಲಿಗಿ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...