alex Certify
ಕನ್ನಡ ದುನಿಯಾ       Mobile App
       

Kannada Duniya

ಮೊಮ್ಮಗನ ಸಾವಿನ ಸುದ್ದಿ ಕೇಳಿ ಅಜ್ಜಿಯೂ ಸಾವು

belaru-aji

ಬಳ್ಳಾರಿ: ಮೊಮ್ಮಗ ಸಾವನ್ನಪ್ಪಿರುವ ಸುದ್ದಿ ತಿಳಿದ ಅಜ್ಜಿಯೂ ಹೃದಯಾಘಾತದಿಂದ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆ ಸಿರಗುಪ್ಪ ತಾಲ್ಲೂಕಿನ ಅಗಸನೂರು ಗ್ರಾಮದಲ್ಲಿ ನಡೆದಿದೆ.

ಆಗಸ್ಟ್ 6 ರಂದು ಶಾಲೆಯಲ್ಲಿ ಆಟವಾಡುವಾಗ, ಮಕ್ಕಳೊಂದಿಗೆ ನಡೆದ ಹೊಡೆದಾಟದಲ್ಲಿ ಬಾಲಕ ಗಾಯಗೊಂಡಿದ್ದು, ಆತನನ್ನು ಬಳ್ಳಾರಿ ಆಸ್ಪತ್ರೆಗೆ ಸೇರಿಸಲಾಗಿದೆ.

ಬಾಲಕನ ಬಾಯಿ ಮತ್ತು ಪಕ್ಕೆಲುಬುಗಳಿಗೆ ಪೆಟ್ಟು ಬಿದ್ದಿದ್ದರಿಂದ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾನೆ. ಈ ವಿಚಾರವನ್ನು ಮನೆಯಲ್ಲಿದ್ದ ಅಜ್ಜಿಗೆ ತಿಳಿಸಲಾಗಿದೆ.

ಮೊಮ್ಮಗನ ಸಾವಿನ ಸುದ್ದಿ ತಿಳಿದ ಅಜ್ಜಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ . ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...