alex Certify
ಕನ್ನಡ ದುನಿಯಾ       Mobile App
       

Kannada Duniya

ವಿದೇಶಿ ಮಹಿಳೆಯೊಂದಿಗೆ ಅಸಭ್ಯ ವರ್ತನೆ

ಬಳ್ಳಾರಿ: ಪ್ರವಾಸಕ್ಕೆ ಬಂದಿದ್ದ ವಿದೇಶಿ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.

ಹೊಸಪೇಟೆ ಹಂಪಿ ಪ್ರದೇಶದಲ್ಲಿ ಕಮಲಾಪುರದ ಜಗನ್ನಾಥ್ ಎಂಬಾತ ಅನುಚಿತವಾಗಿ ವರ್ತಿಸಿದ್ದು, ಘಟನೆಯ ವಿಡಿಯೋ ಜಾಲತಾಣಗಳಲ್ಲಿ ಹರಿದಾಡಿದೆ. ಕಮಲಾಪುರ ಠಾಣೆ ಪೊಲೀಸರ ಗಮನಕ್ಕೂ ಬಂದಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿ ಹಿಂದೆ ವಿರುಪಾಪುರ ಗಡ್ಡಿ ಪ್ರದೇಶದಲ್ಲಿ ಇದೇ ರೀತಿ ವರ್ತಿಸಿದ್ದು, ಗಂಗಾವತಿ ಗ್ರಾಮಾಂತರ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು.

ಈಗ ಮತ್ತೆ ವಿದೇಶಿ ಮಹಿಳೆಯೊಂದಿಗೆ ಅನುಚಿತವಾಗಿ ವರ್ತಿಸಿದ ಹಿನ್ನಲೆಯಲ್ಲಿ ಕಮಲಾಪುರ ಪೊಲೀಸರು ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...