alex Certify
ಕನ್ನಡ ದುನಿಯಾ       Mobile App
       

Kannada Duniya

ಕಾರ್ಪೊರೇಟರ್ ಗೆ ಬೆದರಿಕೆ : ಬೈಕ್ ಗೆ ಬೆಂಕಿ

ballari

ಬಳ್ಳಾರಿ: ಬಳ್ಳಾರಿ ಮಹಾನಗರ ಪಾಲಿಕೆ ಮೇಯರ್, ಉಪಮೇಯರ್ ಚುನಾವಣೆ ಕಾಂಗ್ರೆಸ್ ನಲ್ಲಿಯೇ ಗುಂಪುಗಾರಿಕೆಗೆ ಕಾರಣವಾಗಿದೆ.

ವಾರ್ಡ್ ನಂ. 27 ರ ಕಾಂಗ್ರೆಸ್ ಸದಸ್ಯೆ ದಿವ್ಯಾ ಕುಮಾರಿ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಬೆದರಿಕೆ ಹಾಕಿದ್ದಾರೆ.

ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಯಾರಿಗೆ ಬೆಂಬಲಿಸುತ್ತೀರಿ ಎಂದು ಮಚ್ಚು ಲಾಂಗ್ ಗಳಿಂದ ದಿವ್ಯಾ ಅವರ ಪತಿ ಮತ್ತು ಪುತ್ರಿಗೆ ಬೆದರಿಕೆ ಹಾಕಿದ್ದಾರೆ.

ಬಳಿಕ ಮನೆಯ ಮುಂಭಾಗದಲ್ಲಿ ನಿಲ್ಲಿಸಿದ್ದ 2 ದ್ವಿಚಕ್ರವಾಹನಗಳಿಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಈ ಸಂದರ್ಭದಲ್ಲಿ ದಿವ್ಯಾ ಕುಮಾರಿ ಮನೆಯಲ್ಲಿ ಇರಲಿಲ್ಲ ಎನ್ನಲಾಗಿದೆ.

ಸ್ಥಳಕ್ಕೆ ಕೌಲ್ ಬಜಾರ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಏಪ್ರಿಲ್ 3 ರಂದು ಬಳ್ಳಾರಿ ಮೇಯರ್, ಉಪಮೇಯರ್ ಆಯ್ಕೆಗೆ ಚುನಾವಣೆ ನಡೆಯಲಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...