alex Certify
ಕನ್ನಡ ದುನಿಯಾ       Mobile App
       

Kannada Duniya

ಪ್ರಿಯಕರನ ಜೊತೆ ವಿವಾಹಿತ ಮಹಿಳೆ ನೇಣಿಗೆ ಶರಣು

ವಿವಾಹಿತ ಮಹಿಳೆಯೊಬ್ಬಳು ತನ್ನ ಪ್ರಿಯಕರನೊಂದಿಗೆ ನೇಣು ಬಿಗಿದುಕೊಂಡು ಸಾವಿಗೆ ಶರಣಾಗಿರುವ ಘಟನೆ ಬಳ್ಳಾರಿ ಜಿಲ್ಲೆ ಕೂಡ್ಲಿಗಿ ತಾಲೂಕಿನ ಚಿರತಗುಂಡದಲ್ಲಿ ನಡೆದಿದೆ.

ಶೋಭಿತಾ ಹಾಗೂ ತಿಪ್ಪೇಸ್ವಾಮಿ ನೇಣಿಗೆ ಶರಣಾಗಿದ್ದು, ಕಳೆದ ಐದು ವರ್ಷಗಳಿಂದ ಪರಸ್ಪರ ಪ್ರೀತಿಸುತ್ತಿದ್ದ ಅವರಿಬ್ಬರು ಮದುವೆಯಾಗಲು ಬಯಸಿದ್ದರೆನ್ನಲಾಗಿದೆ. ಆದರೆ ಪೋಷಕರ ವಿರೋಧದಿಂದ ಇದು ಸಾಧ್ಯವಾಗಿರಲಿಲ್ಲ.

ಶೋಭಿತಾಳ ವಿವಾಹ ಮತ್ತೊಬ್ಬನೊಂದಿಗೆ ನೆರವೇರಿದ್ದು, ಆ ಬಳಿಕವೂ ಇವರಿಬ್ಬರ ಪ್ರೀತಿ ಮುಂದುವರೆದಿತ್ತೆನ್ನಲಾಗಿದೆ. ಈಗ ಜಮೀನೊಂದರಲ್ಲಿ ಒಂದೇ ಸೀರೆಯಲ್ಲೇ ಮರಕ್ಕೆ ನೇಣು ಬಿಗಿದುಕೊಂಡು ಇವರಿಬ್ಬರು ಸಾವನ್ನಪ್ಪಿದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...