alex Certify
ಕನ್ನಡ ದುನಿಯಾ       Mobile App
       

Kannada Duniya

‘ಶೋಭಾ ಮೇಡಂ ಮನೆಯಲ್ಲಿದೆಯಂತೆ ಯಡಿಯೂರಪ್ಪನವರ ದುಡ್ಡು’

ಸಚಿವ ಡಿ.ಕೆ. ಶಿವಕುಮಾರ್ ಅವರ ವಿರುದ್ಧ ಆದಾಯ ತೆರಿಗೆ ಇಲಾಖೆ ಸಲ್ಲಿಸಿರುವ ದೂರಿನ ಕುರಿತು ಕಿಡಿ ಕಾರಿರುವ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ, ಬೇರೆ ಪಕ್ಷಗಳ ನಾಯಕರ ಮನೆಯ ಮೇಲೆ ಐಟಿ ದಾಳಿ ನಡೆಯುತ್ತದೆ. ಆದರೆ ಬಿಜೆಪಿ ಮುಖಂಡರ ಮನೆ ಮೇಲೆ ಏಕೆ ದಾಳಿ ನಡೆಯುವುದಿಲ್ಲ ಎಂದು ಪ್ರಶ್ನಿಸಿದ್ದಾರೆ.

ಶಿವಮೊಗ್ಗದಲ್ಲಿಂದು ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಶೋಭಾ ಮೇಡಂ ಅವರ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರೆ ಯಡಿಯೂರಪ್ಪನವರ ಅಕ್ರಮ ಸಂಪತ್ತು ಪತ್ತೆಯಾಗಲಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

ರಾಜಕೀಯ ವಿರೋಧಿಗಳನ್ನು ಮಣಿಸಲು ಬಿಜೆಪಿ ನಾಯಕರು ಐಟಿ ಇಲಾಖೆಯನ್ನು ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಆರೋಪಿಸಿದ ಬೇಳೂರು ಗೋಪಾಲಕೃಷ್ಣ, ಬಿಜೆಪಿ ನಾಯಕರ ಮನೆಯ ಮೇಲೂ ದಾಳಿ ನಡೆಸಲಿ ಎಂದು ಆಗ್ರಹಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...