alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜ್ಯದ ವಿವಿಧೆಡೆ ಎ.ಸಿ.ಬಿ. ದಾಳಿ

acb-raid-n

ಬೆಂಗಳೂರು: ಭ್ರಷ್ಟಾಚಾರ ನಿಗ್ರಹದಗಳದ(ಎ.ಸಿ.ಬಿ.) ಅಧಿಕಾರಿಗಳು ರಾಜ್ಯದ ವಿವಿಧ ಕಡೆಗಳಲ್ಲಿ ಏಕಕಾಲಕ್ಕೆ ಕಾರ್ಯಾಚರಣೆ ನಡೆಸಿದ್ದಾರೆ.

ಬೆಂಗಳೂರು, ಚಿತ್ರದುರ್ಗ, ಬೆಳಗಾವಿ, ಹಾಸನ, ಶಿವಮೊಗ್ಗ, ಹುಬ್ಬಳ್ಳಿ ಮೊದಲಾದ ಕಡೆಗಳಲ್ಲಿ ಅಧಿಕಾರಿಗಳ ಮನೆ ಮೇಲೆ ದಾಳಿ ನಡೆಸಿದ್ದು, ದಾಖಲೆ ಪರಿಶೀಲನೆ ನಡೆಸಿದ್ದಾರೆ.

ಬೆಳಗಾವಿಯ ಉಪ ತಹಶೀಲ್ದಾರ್ ಸಲೀಂ ಸಾಬ್ ಅವರ ನಿವಾಸದ ಮೇಲೆ ದಾಳಿ ನಡೆಸಲಾಗಿದೆ. ಅದೇ ರೀತಿ  ಚಿತ್ರದುರ್ಗದ ಸಾರಿಗೆ ಇಲಾಖೆ ಅಧಿಕಾರಿ ಕರುಣಾಕರ್ ಅವರ ನಿವಾಸ ಮತ್ತು ಶಿವಮೊಗ್ಗದ ನಿವಾಸದ ಮೇಲೆ ದಾಳಿ ಮಾಡಿ ದಾಖಲೆ ಪರಿಶೀಲನೆ ನಡೆಸಲಾಗಿದೆ.

ಹುಬ್ಬಳ್ಳಿಯಲ್ಲಿ ವಾಣಿಜ್ಯ ತೆರಿಗೆ ಇಲಾಖೆ ಸಹಾಯಕ ಆಯಕ್ತ ಕರಿಯಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಲಾಗಿದೆ. ಬೆಂಗಳೂರಿನಲ್ಲಿ ಬಿ.ಬಿ.ಎಂ.ಪಿ. ಅಧಿಕಾರಿ ಹಾಗೂ ಬಿ.ಡಿ.ಎ. ಇಂಜಿನಿಯರ್ ಒಬ್ಬರ ಮನೆ ಮೇಲೆ ದಾಳಿ ನಡೆಸಲಾಗಿದೆ.

ದಾಳಿಯ ಸಂದರ್ಭದಲ್ಲಿ ಆದಾಯ ಮೀರಿ ಅಕ್ರಮವಾಗಿ ಆಸ್ತಿ ಸಂಪಾದನೆ ಮಾಡಿರುವುದು ಗೊತ್ತಾಗಿದ್ದು, ಪರಿಶೀಲನೆ ಕಾರ್ಯ ಮುಂದುವರೆದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...