alex Certify
ಕನ್ನಡ ದುನಿಯಾ       Mobile App
       

Kannada Duniya

ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರ ದುರ್ಮರಣ

ಬೆಂಗಳೂರು: ಕ್ಯಾಂಟರ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ನೆಲಮಂಗಲ ಬಳಿ ನಡೆದಿದೆ.

ಜಗದೀಶ್(30), ಸೀನಾನಾಯ್ಕ್(32) ಮೃತಪಟ್ಟವರೆಂದು ಗುರುತಿಸಲಾಗಿದೆ. ಬೆಂಗಳೂರು ಹೊರವಲಯದ ಡಾಬಸ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.

ನಿಡವಂದ ಗ್ರಾಮದ ಬಳಿಕ ಬೈಕ್ ನಲ್ಲಿ ತೆರಳುವಾಗ ಎದುರಿನಿಂದ ಬಂದ ಕ್ಯಾಂಟರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವು ಕಂಡಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ. ಕ್ಯಾಂಟರ್ ಚಾಲಕನ ನಿರ್ಲಕ್ಷ್ಯವೇ ಅಪಘಾತಕ್ಕೆ ಕಾರಣವೆನ್ನಲಾಗಿದೆ. ಅಪಘಾತದ ಬಳಿಕ ಕ್ಯಾಂಟರ್ ಚಾಲಕ ಪರಾರಿಯಾಗಿದ್ದಾನೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...