alex Certify
ಕನ್ನಡ ದುನಿಯಾ       Mobile App
       

Kannada Duniya

ಜೀವಕ್ಕೆ ಎರವಾಯ್ತು ಮತ್ತಿನಲ್ಲಿ ಮಾಡಿದ ಕೆಲಸ

ಬೆಂಗಳೂರು: ಅಂಗಡಿಗೆ ಕಾರು ಗುದ್ದಿದ ಪರಿಣಾಮ ಗಂಭೀರವಾಗಿ ಗಾಯಗೊಂಡಿದ್ದ ಆಫ್ರಿಕನ್ ಪ್ರಜೆ ಮೃತಪಟ್ಟ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಹೆಣ್ಣೂರು ಗೆದ್ದಲಹಳ್ಳಿಯಲ್ಲಿ ಘಟನೆ ನಡೆದಿದ್ದು, ಗಾಯಗೊಂಡ ಮೂವರನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

ಕುಡಿದ ಮತ್ತಿನಲ್ಲಿ ಹುಸ್ನಿಯಾ ಜಿಬಲಾನಿ ಕಾರು ಚಾಲನೆ ಮಾಡಿಕೊಂಡು ಬಂದಿದ್ದು, ಕಾರಿನಲ್ಲಿದ್ದ ಜೊತೆಗಾರರು ಕೂಡ ಮದ್ಯ ಸೇವಿಸಿದ್ದಾರೆ. ಅಮಲಿನಲ್ಲಿ ಅಡ್ಡಾದಿಡ್ಡಿಯಾಗಿ ಕಾರು ಚಾಲನೆ ಮಾಡಿಕೊಂಡು ಬಂದು ಅಂಗಡಿಗೆ ಡಿಕ್ಕಿ ಹೊಡೆಸಿದ್ದು, ಸ್ಥಳೀಯರು ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಿದ್ದಾರೆ.

ಅವರಲ್ಲಿ ಒಬ್ಬಾತ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಬಾಣಸವಾಡಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...