alex Certify
ಕನ್ನಡ ದುನಿಯಾ       Mobile App
       

Kannada Duniya

ಸ್ಯಾಂಡಲ್ ವುಡ್ ನಟನ ಮೇಲೆ ಪೊಲೀಸರ ಹಲ್ಲೆ…?

ಬೆಂಗಳೂರು: ಬೆಂಗಳೂರಿನಲ್ಲಿ ಪೊಲೀಸರು ದೌರ್ಜನ್ಯ ನಡೆಸಿದ್ದು, ಸ್ಯಾಂಡಲ್ ವುಡ್ ನಟರೊಬ್ಬರ ಮೇಲೆ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.

ನಟ ಹಾಗೂ ಕ್ಯಾಬ್ ಚಾಲಕನಾಗಿರುವ ಸಂತೋಷ್ ಹಲ್ಲೆಗೆ ಒಳಗಾದವರು. ನವೆಂಬರ್ 3 ರಂದು ವೈಟ್ ಫೀಲ್ಡ್ ಸಂಚಾರ ಠಾಣೆ ಪೊಲೀಸರು ಹಲ್ಲೆ ಮಾಡಿದ್ದಾರೆ ಎಂದು ಸಂತೋಷ್ ದೂರಿದ್ದಾರೆ.

ಕ್ಯಾಬ್ ನಲ್ಲಿ ಪ್ರಯಾಣಿಕರನ್ನು ಕರೆದುಕೊಂಡು ಹೋಗಲು ಸಂತೋಷ್ ಐ.ಟಿ.ಪಿ.ಸಿ. ರಸ್ತೆಯ ಕಂಪನಿಗೆ ಹೋಗಿದ್ದು, ರಸ್ತೆ ಬದಿ ಕಾರು ನಿಲ್ಲಿಸಿದ್ದಾರೆ. ಅಲ್ಲಿಗೆ ಬಂದ ಪೊಲೀಸರಿಬ್ಬರು ಕಾರಿನ ಕೀ ಕಸಿದುಕೊಂಡು ದೌರ್ಜನ್ಯ ನಡೆಸಿ ವಾಹನದಲ್ಲಿ ಕರೆದೊಯ್ದು ಹಲ್ಲೆ ಮಾಡಿದ್ದಾರೆ.

ಇದನ್ನು ಹಿರಿಯ ಪೊಲೀಸ್ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ, ಯಾವುದೇ ಪ್ರಯೋಜನವಾಗಿಲ್ಲ ಎಂದು ಸಂತೋಷ್ ಅಳಲು ತೋಡಿಕೊಂಡಿದ್ದಾರೆ. ಅವರು ‘ಮುಗಿಲು’, ‘ಡಿ’, ‘ಲೋಕಲ್’ ಮೊದಲಾದ ಚಿತ್ರಗಳಲ್ಲಿ ಅಭಿನಯಿಸಿದ್ದಾರೆ. ಚಾಲಕರಾಗಿಯೂ ಕೆಲಸ ಮಾಡುತ್ತಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...