alex Certify
ಕನ್ನಡ ದುನಿಯಾ       Mobile App
       

Kannada Duniya

ಅನಂತ್ ಕುಮಾರ್ ಇದ್ದ ವಿಮಾನದಲ್ಲಿ ತಾಂತ್ರಿಕ ದೋಷ

ಬೆಂಗಳೂರು: ಕೇಂದ್ರ ಸಚಿವ ಅನಂತ್ ಕುಮಾರ್ ಸೇರಿದಂತೆ, ಹಲವಾರು ಪ್ರಯಾಣಿಕರು ಪ್ರಯಾಣಿಸಬೇಕಿದ್ದ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಕೆಲಕಾಲ ಆತಂಕಕ್ಕೆ ಕಾರಣವಾಗಿದೆ.

ಬೆಂಗಳೂರು ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಬೆಳಿಗ್ಗೆ 7 ಗಂಟೆಗೆ ದೆಹಲಿಗೆ ಜೆಟ್ ಏರ್ ವೇಸ್ ಗೆ ಸೇರಿದ ವಿಮಾನ ಹೊರಡಬೇಕಿತ್ತು. ರನ್ ವೇ ನಿಂದ ಸ್ವಲ್ಪ ದೂರಕ್ಕೆ ಚಲಿಸಿದ ಕೂಡಲೇ, ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಇದರಿಂದಾಗಿ ಪ್ರಯಾಣಿಕರು ಹಾಗೂ ಸಿಬ್ಬಂದಿ ಆತಂಕಗೊಂಡಿದ್ದಾರೆ.

ಕೂಡಲೇ ಕ್ರಮಕೈಗೊಂಡ ಪೈಲಟ್, ರನ್ ವೇನಲ್ಲಿಯೇ ವಿಮಾನವನ್ನು ನಿಲ್ಲಿಸಿದ್ದು, ಆತಂಕದಲ್ಲಿದ್ದ ಪ್ರಯಾಣಿಕರು ನಿಟ್ಟುಸಿರು ಬಿಟ್ಟಿದ್ದಾರೆ. ತಾಂತ್ರಿಕ ಸಿಬ್ಬಂದಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...