alex Certify
ಕನ್ನಡ ದುನಿಯಾ       Mobile App
       

Kannada Duniya

ಅಮಿತ್ ಶಾ ಆಗಮನ, ತಡ ರಾತ್ರಿವರೆಗೂ ಮೀಟಿಂಗ್

ಬೆಂಗಳೂರು : ಮುಂದಿನ ವಿಧಾನಸಭೆ ಚುನಾವಣೆ ಹಿನ್ನಲೆಯಲ್ಲಿ ರಾಜ್ಯ ಪ್ರವಾಸ ಕೈಗೊಂಡಿರುವ ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಇಂದು ಸಂಜೆ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದಿದ್ದಾರೆ. ಅವರನ್ನು ಬಿ.ಜೆ.ಪಿ. ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಳಿ ಸ್ವಾಗತಿಸಿದ್ದಾರೆ.

ವಿಮಾನ ನಿಲ್ದಾಣದಿಂದ ಯಲಹಂಕದ ರೆಸಾರ್ಟ್ ಗೆ ತೆರಳಿದ ಅಮಿತ್ ಶಾ ತಡರಾತ್ರಿವರೆಗೂ ಪಕ್ಷದ ನಾಯಕರೊಂದಿಗೆ ಸಭೆ ನಡೆಸಲಿದ್ದಾರೆ. ನಾಳೆ ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆಯಲ್ಲಿ ನಡೆಯಲಿರುವ ಪಕ್ಷದ ಸಮಾವೇಶದಲ್ಲಿ ಅಮಿತ್ ಶಾ ಭಾಗವಹಿಸಲಿದ್ದಾರೆ.

ಇತ್ತೀಚೆಗಷ್ಟೇ ರಾಜ್ಯಕ್ಕೆ ಭೇಟಿ ನೀಡಿದ್ದ ಅಮಿತ್ ಶಾ, ಪರಿವರ್ತನಾ ಯಾತ್ರೆ, ಪಕ್ಷ ಸಂಘಟನೆ, ಕೈಗೊಳ್ಳಬೇಕಿರುವ ಕ್ರಮಗಳ ಕುರಿತಾಗಿ ಸಮಾಲೋಚನೆ ನಡೆಸಿದ್ದರು. ಇಂದಿನ ಸಭೆಯಲ್ಲಿ ಅದರ ಪರಾಮರ್ಶೆ ನಡೆಸಲಿದ್ದಾರೆ.

ರಾಜ್ಯದ ಎಲ್ಲಾ ಕ್ಷೇತ್ರಗಳಿಗೂ ನೇಮಿಸಿದ್ದ ವೀಕ್ಷಕರ ತಂಡ ನೀಡಿರುವ ವರದಿ, ಅಭ್ಯರ್ಥಿಗಳ ಮಾಹಿತಿ ಮೊದಲಾದವುಗಳ ಕುರಿತಾಗಿ ಅವರು ಚರ್ಚೆ ನಡೆಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಗುಜರಾತ್ ಫಲಿತಾಂಶ ಕರ್ನಾಟಕ ವಿಧಾನಸಭಾ ಚುನಾವಣೆ ಮೇಲೆ ಪರಿಣಾಮ ಬೀರಲಿದೆಯೇ...?

    View Results

    Loading ... Loading ...