alex Certify
ಕನ್ನಡ ದುನಿಯಾ       Mobile App
       

Kannada Duniya

‘ಪೆಟ್ರೋಲ್’ ನಾರಾಯಣಸ್ವಾಮಿ ಅರೆಸ್ಟ್

ಬೆಂಗಳೂರು: ಕೆ.ಆರ್. ಪುರಂ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ನಾರಾಯಣಸ್ವಾಮಿಯನ್ನು ರಾಮಮೂರ್ತಿ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಹೊರಮಾವು ಬಿ.ಬಿ.ಎಂ.ಪಿ. ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಲು ನಾರಾಯಣಸ್ವಾಮಿ ಯತ್ನಿಸಿದ್ದರು. ಅಕ್ರಮವಾಗಿ ಖಾತೆ ಮಾಡಿಕೊಡಲು ಕಂದಾಯ ವಿಭಾಗದ ಅಧಿಕಾರಿಗೆ ಒತ್ತಡ ಹಾಕಿದ್ದ ನಾರಾಯಣಸ್ವಾಮಿ, ಅಧಿಕಾರಿ ಮಣಿಯದಿದ್ದಾಗ, ಕಚೇರಿಗೆ ನುಗ್ಗಿ ಪೆಟ್ರೋಲ್ ಸುರಿದು ದೌರ್ಜನ್ಯ ನಡೆಸಿದ್ದರು. ಈತನ ಕೃತ್ಯಕ್ಕೆ ಭಾರೀ ಆಕ್ರೋಶ ವ್ಯಕ್ತವಾಗಿತ್ತು.

ಮುಖ್ಯಮಂತ್ರಿಯವರ ಗಮನಕ್ಕೂ ಈ ವಿಚಾರ ಬಂದಿದ್ದು, ನಾರಾಯಣಸ್ವಾಮಿ ಬಂಧಿಸುವಂತೆ ಸೂಚಿಸಲಾಗಿತ್ತು. ಸದನದಲ್ಲಿಯೂ ವಿಚಾರ ಪ್ರಸ್ತಾಪಿಸಿದ ಪ್ರತಿಪಕ್ಷಗಳು ಕಾಂಗ್ರೆಸ್ ಸರ್ಕಾರವನ್ನು ಟೀಕಿಸಿದ್ದವು. ಕಾಂಗ್ರೆಸ್ ಪಕ್ಷದಿಂದ ಆತನನ್ನು ಉಚ್ಛಾಟಿಸಲಾಗಿತ್ತು. 2 ದಿನಗಳಿಂದ ತಲೆ ಮರೆಸಿಕೊಂಡಿದ್ದ ನಾರಾಯಣಸ್ವಾಮಿಯನ್ನು ಪೊಲೀಸರು ಬಂಧಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...