alex Certify
ಕನ್ನಡ ದುನಿಯಾ       Mobile App
       

Kannada Duniya

‘ಇನ್ನೂ 3 -4 ಶಾಸಕರು ಬಿ.ಜೆ.ಪಿ.ಗೆ ಸೇರ್ಪಡೆ’

ಬೆಂಗಳೂರು: ಮಿಷನ್ 150 ಗುರಿ ತಲುಪಲು ಪೂರಕ ವಾತಾವರಣ ಕಂಡು ಬಂದಿದೆ. ಪಕ್ಷಕ್ಕೆ ಸೇರ್ಪಡೆಯಾಗುವವರ ಸಂಖ್ಯೆ ಹೆಚ್ಚಾಗ್ತಿದೆ ಎಂದು ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದ್ದಾರೆ.

ಒಂದೆರಡು ದಿನಗಳಲ್ಲಿ ಜೆ.ಡಿ.ಎಸ್. ಹಾಗೂ ಕಾಂಗ್ರೆಸ್ ಪಕ್ಷದಿಂದ 3 -4 ಮಂದಿ ಶಾಸಕರು ಬಿ.ಜೆ.ಪಿ.ಗೆ ಸೇರಲಿದ್ದಾರೆ. ಬಸವನಗೌಡ ಪಾಟೀಲ್ ಯತ್ನಾಳ್ ಅವರ ಸೇರ್ಪಡೆಯಿಂದ ಪಕ್ಷದ ಬಲ ಹೆಚ್ಚಾಗಿದೆ ಎಂದು ತಿಳಿಸಿದ್ದಾರೆ.

ಕಳೆದ 2 ದಿನಗಳಿಂದ ಪಕ್ಷದ ಅಭ್ಯರ್ಥಿಗಳ ಆಯ್ಕೆ ಕುರಿತಾಗಿ ಮಂಡಲ ಪ್ರಮುಖರಿಂದ ಅಭಿಪ್ರಾಯ ಸಂಗ್ರಹಿಸಲಾಗಿದೆ. ಈ ಅಭಿಪ್ರಾಯ ಮತ್ತು ಸರ್ವೇಗಳನ್ನು ಆಧರಿಸಿ, ಬಿ.ಜೆ.ಪಿ. ಅಧ್ಯಕ್ಷ ಅಮಿತ್ ಶಾ ನೇತೃತ್ವದಲ್ಲಿ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು ಎಂದು ಹೇಳಿದ್ದಾರೆ.

ಈಗಾಗಲೇ ಮೊದಲ ಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ದೆಹಲಿಗೆ ತೆರಳಿ ವರಿಷ್ಠರಿಂದ ಅನುಮೋದನೆ ಪಡೆದು ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...