alex Certify
ಕನ್ನಡ ದುನಿಯಾ       Mobile App
       

Kannada Duniya

ಮುಸ್ಲಿಂ ಬಾಂಧವರಿಂದ ಪ್ರಾರ್ಥನೆ ಸಲ್ಲಿಕೆ

mu

ಬೆಂಗಳೂರು: ಕಾವೇರಿ ಹೋರಾಟದ ಕಿಚ್ಚಿಗೆ ಬೆಂಗಳೂರಿನಲ್ಲಿ ಉದ್ವಿಗ್ನ ಸ್ಥಿತಿ ಉಂಟಾಗಿದೆ. ಕೆಲವು ಕಡೆಗಳಲ್ಲಿ ಕರ್ಫ್ಯೂ ಹಾಗೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

ಮುಸ್ಲಿಂ ಬಾಂಧವರಿಗೆ ಬಕ್ರಿದ್ ಪ್ರಾರ್ಥನೆಗೆ ತೊಂದರೆಯಾಗದಂತೆ ಪೊಲೀಸರು ಕ್ರಮ ಕೈಗೊಂಡಿದ್ದಾರೆ. ಮೈಸೂರು ರಸ್ತೆಯ ಸ್ಯಾಟ್ ಲೈಟ್ ಬಸ್ ನಿಲ್ದಾಣ ಸಮೀಪ ಹಾಗೂ ಫ್ಲೈ ಓವರ್ ಬಳಿ ಇರುವ ಮಸೀದಿಗಳಲ್ಲಿ ಮುಸ್ಲಿಂ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಪ್ರಾರ್ಥನೆ ಸಲ್ಲಿಸಿದ್ದಾರೆ. ಈ ಪ್ರದೇಶಗಳ ಮುಸ್ಲಿಂ ಬಾಂಧವರು ಮಸೀದಿಗೆ ಬಂದು ಹೋಗಲು ಪೊಲೀಸರು ಅವಕಾಶ ಮಾಡಿದ್ದಾರೆ. ಯಾವುದೇ ತೊಂದರೆಯಾಗದಂತೆ ಭದ್ರತೆ ಒದಗಿಸಿದ್ದಾರೆ.

ಕರ್ಪ್ಯೂ, ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಅನೇಕ ಏರಿಯಾಗಳಲ್ಲಿ ಮೈಕ್ ಮೂಲಕ ಎಚ್ಚರಿಕೆ ನೀಡಲಾಗಿದೆ ಪೊಲೀಸ್ ಹಾಗೂ ಅರೆಸೇನಾ ಪಡೆಗಳಿಂದ ಫ್ಲ್ಯಾಗ್ ಮಾರ್ಚ್ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...