alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯಾಂಕ್ ಮ್ಯಾನೇಜರ್ ಅನುಮಾನಾಸ್ಪದ ಸಾವು

dead-body-d

ಬೆಂಗಳೂರು: ಕಾರಿನಲ್ಲಿಯೇ ಬ್ಯಾಂಕ್ ಮ್ಯಾನೇಜರ್ ಒಬ್ಬರು ಅನುಮಾನಾಸ್ಪದವಾಗಿ ಸಾವು ಕಂಡಿರುವ ಘಟನೆ ರಿಂಗ್ ರಸ್ತೆಯ ಕಂಠೀರವ ಸ್ಟುಡಿಯೊ ಬಳಿ ನಡೆದಿದೆ.

ಅಮೃತ್ ಹಳ್ಳಿಯಲ್ಲಿರುವ ಖಾಸಗಿ ಕೋ ಆಪರೇಟಿವ್ ಬ್ಯಾಂಕ್ ನ ಮ್ಯಾನೇಜರ್ ಮುನಿಯಪ್ಪ(55) ಮೃತಪಟ್ಟವರು. ಹೊಸಕೋಟೆ ತಾಲ್ಲೂಕಿನ ಮುನಿಯಪ್ಪ ಆರ್.ಟಿ. ನಗರದಲ್ಲಿ ವಾಸವಾಗಿದ್ದಾರೆ.

ಸ್ವಾತಂತ್ರ್ಯ ದಿನದಂದು ಕಚೇರಿಗೆ ರಜೆ ಇದ್ದ ಕಾರಣ ಕೆಂಗೇರಿಗೆ ಹೋಗುವುದಾಗಿ ಮನೆಯಿಂದ ತೆರಳಿದ್ದ ಅವರು ನಾಪತ್ತೆಯಾಗಿದ್ದ ಕಾರಣ ಮನೆಯವರು ಆರ್.ಟಿ. ನಗರ ಠಾಣೆ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇಂದು ಮಧ್ಯಾಹ್ನ ಕಾರಿನಲ್ಲಿ ಅವರ ಶವ ಪತ್ತೆಯಾಗಿದ್ದು, ಬಳಿಯಲ್ಲೇ ವಿಷದ ಬಾಟಲಿ ಕೂಡ ಕಂಡು ಬಂದಿದೆ ಎನ್ನಲಾಗಿದೆ.

ಅವರ ಕುಟುಂಬದವರು ಸಾವಿನ ಕುರಿತಾಗಿ ಅನುಮಾನ ವ್ಯಕ್ತಪಡಿಸಿದ್ದಾರೆ. ಕಾಮಾಕ್ಷಿಪಾಳ್ಯ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...