alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ನಡೆದಿದೆ ಆಘಾತಕಾರಿ ಘಟನೆ

ಬೆಂಗಳೂರು: ಬುದ್ಧಿಮಾತು ಹೇಳಿದ ಪಿ.ಎಸ್.ಐ. ಮೇಲೆ ಪುಂಡರು ಹಲ್ಲೆ ನಡೆಸಿದ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಹೆಚ್.ಎ.ಎಲ್. ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಜನವರಿ 13 ರಂದು ತಡರಾತ್ರಿ ಗಸ್ತಿನಲ್ಲಿದ್ದ ಪಿ.ಎಸ್.ಐ. ಮತ್ತು ಪೊಲೀಸರು ರಸ್ತೆ ಮಧ್ಯದಲ್ಲಿ ಕುಡಿದು ಕೂಗಾಡುತ್ತಿದ್ದ ಮೂವರಿಗೆ ಸ್ಥಳದಿಂದ ತೆರಳುವಂತೆ ಸೂಚನೆ ನೀಡಿದ್ದಾರೆ.

ಈ ಸಂದರ್ಭದಲ್ಲಿ ಮಾತಿಗೆ ಮಾತು ಬೆಳೆದು ಸಮೀರ್ ಖಾನ್ ಎಂಬಾತ, ಪಿ.ಎಸ್.ಐ. ಮೇಲೆ ಬಿಯರ್ ಬಾಟಲಿಯಿಂದ ಹಲ್ಲೆ ಮಾಡಿ, ಮುಷ್ಠಿಯಿಂದ ಗುದ್ದಿದ್ದಾನೆ.

ಜೊತೆಗಿದ್ದ ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕರ್ತವ್ಯ ನಿರತ ಪೊಲೀಸರ ಮೇಲೆಯೇ ದುಷ್ಕರ್ಮಿಗಳು ಹಲ್ಲೆ ನಡೆಸಿರುವುದು ಆತಂಕಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...