alex Certify
ಕನ್ನಡ ದುನಿಯಾ       Mobile App
       

Kannada Duniya

ಇಂದು ನಡೆಯಲಿದೆ ಬಿ.ಜೆ.ಪಿ. ಕೋರ್ ಕಮಿಟಿ ಸಭೆ

ಬೆಂಗಳೂರು: ನವಕರ್ನಾಟಕ ಪರಿವರ್ತನಾ ಯಾತ್ರೆಯ ಮೊದಲ ಹಂತವನ್ನು ಯಶಸ್ವಿಯಾಗಿ ನಡೆಸಿರುವ ಬಿ.ಜೆ.ಪಿ. ನಾಯಕರು ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಇಂದು ನಡೆಯಲಿರುವ ಸಭೆಯಲ್ಲಿ ಚರ್ಚಿಸಲಿದ್ದಾರೆ.

ಬಿ.ಜೆ.ಪಿ. ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಸಭೆಯಲ್ಲಿ ಪ್ರಮುಖವಾಗಿ ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ಚುನಾವಣೆ ಕುರಿತಾಗಿ ಚರ್ಚೆ ನಡೆಯಲಿದೆ.

ಅಧಿವೇಶನದಲ್ಲಿ ಸಚಿವ ಕೆ.ಜೆ. ಜಾರ್ಜ್ ಅವರ ರಾಜೀನಾಮೆ ಪಡೆಯಲು ನಡೆಸಿದ ಹೋರಾಟ ಮತ್ತು ಸಚಿವ ವಿನಯ್ ಕುಲಕರ್ಣಿ ಅವರ ವಿರುದ್ಧ ಕೈಗೊಳ್ಳಬೇಕಿರುವ ಹೋರಾಟದ ಕುರಿತು ಚರ್ಚೆ ನಡೆಯಲಿದೆ ಎನ್ನಲಾಗಿದೆ.

ಸಭೆಯಲ್ಲಿ ಕೇಂದ್ರ ಸಚಿವರಾದ ಪ್ರಕಾಶ್ ಜಾವಡೇಕರ್, ಅನಂತ್ ಕುಮಾರ್, ಪಿಯೂಶ್ ಗೋಯೆಲ್, ಡಿ.ವಿ. ಸದಾನಂದಗೌಡ ಹಾಗೂ ರಾಜ್ಯ ನಾಯಕರಾದ ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ ಸೇರಿ ಹಲವರು ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...