alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರು ಗೆಲ್ಲಲು ಬಿ.ಜೆ.ಪಿ. ಮಾಸ್ಟರ್ ಪ್ಲಾನ್

ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಗೆಲ್ಲಲು ಮಾಸ್ಟರ್ ಪ್ಲಾನ್ ಮಾಡಿರುವ ಬಿ.ಜೆ.ಪಿ. ಮತ್ತೊಂದು ಯಾತ್ರೆ ಕೈಗೊಂಡಿದೆ.

ಹನುಮಂತನಗರದ ಗವಿ ಗಂಗಾಧರೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ ಬಿ.ಜೆ.ಪಿ. ಬೆಂಗಳೂರು ರಕ್ಷಾ ಯಾತ್ರೆ ಕೈಗೊಂಡಿದೆ. ಪಕ್ಷದ ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಕೇಂದ್ರ ಸಚಿವರಾದ ಅನಂತಕುಮಾರ್, ಡಿ.ವಿ. ಸದಾನಂದಗೌಡ, ಮಾಜಿ ಡಿ.ಸಿ.ಎಂ. ಆರ್. ಅಶೋಕ್ ಹಾಗೂ ಬಿ.ಜೆ.ಪಿ. ಶಾಸಕರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದಾರೆ.

ಕಾಂಗ್ರೆಸ್ ಶಾಸಕರ ಬೆಂಬಲಿಗರು ಸಿಲಿಕಾನ್ ಸಿಟಿಯಲ್ಲಿ ನಡೆಸುತ್ತಿರುವ ಗೂಂಡಾಗಿರಿಯ ವಿರುದ್ಧ ಬಿ.ಜೆ.ಪಿ. ಯಾತ್ರೆ ಕೈಗೊಂಡಿದೆ. ರಾಜ್ಯ ಸರ್ಕಾರ, ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿದೆ. ಸರ್ಕಾರದ ವೈಫಲ್ಯವನ್ನು ಜನರಿಗೆ ತಿಳಿಸಲು ಪಾದಯಾತ್ರೆ ಹಮ್ಮಿಕೊಂಡಿರುವುದಾಗಿ ಪಕ್ಷದ ನಾಯಕರು ಹೇಳಿದ್ದಾರೆ.

ಇಂದಿನಿಂದ ಪ್ರತಿದಿನ 2 ವಿಧಾನಸಭೆ ಕ್ಷೇತ್ರಗಳಲ್ಲಿ ರಕ್ಷಾ ಯಾತ್ರೆ ಸಂಚರಿಸಲಿದೆ. ಮೊದಲ ದಿನವಾದ ಇಂದು ಬಸನವನಗುಡಿ, ಶಾಂತಿನಗರ ಕ್ಷೇತ್ರದಲ್ಲಿ ಪಾದಯಾತ್ರೆ ನಡೆಸಲಾಗುವುದು. ಮಾರ್ಚ್ 15 ರಂದು ಸಮಾರೋಪ ಸಮಾರಂಭ ನಡೆಯಲಿದ್ದು, ಬಿ.ಜೆ.ಪಿ. ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಾಗವಹಿಸಲಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...