alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಲಿಂಡರ್ ಸ್ಪೋಟಕ್ಕೆ ಕಟ್ಟಡ ಕುಸಿದು 3 ಮಂದಿ ಸಾವು

ಬೆಂಗಳೂರು: ಈಜಿಪುರ ಗುಂಡಪ್ಪ ಲೇಔಟ್ ನಲ್ಲಿ ಅಡುಗೆ ಸಿಲಿಂಡರ್ ಸ್ಪೋಟಿಸಿ, 2 ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಮೂವರು ಸಾವನ್ನಪ್ಪಿದ್ದಾರೆ.

ಅಶ್ವಿನಿ(22), ಶರವಣ(40) ಹಾಗೂ ಸಂಜನಾ ಮೃತಪಟ್ಟವರೆಂದು ಹೇಳಲಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ 6 ಮಂದಿಯನ್ನು ರಕ್ಷಿಸಿ ಆಸ್ಪತ್ರೆಗೆ ಸೇರಿಸಲಾಗಿದೆ.

ಸುದ್ದಿ ತಿಳಿದ ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯ ಕೈಗೊಂಡಿದ್ದಾರೆ.

ಅವಶೇಷಗಳಡಿ ಇನ್ನೂ ಹಲವರು ಸಿಲುಕಿರುವ ಶಂಕೆ ಇದ್ದು, ಹುಡುಕಾಟ ನಡೆಸಲಾಗಿದೆ. ಸ್ಥಳಕ್ಕೆ ಗೃಹ ಸಚಿವ ರಾಮಲಿಂಗಾರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...