alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಮತ್ತೊಂದು ಕಟ್ಟಡ ಕುಸಿತ

ಬೆಂಗಳೂರು: ಈಜಿಪುರದಲ್ಲಿ ಕಟ್ಟಡ ಕುಸಿದು 7 ಮಂದಿ ಸಾವು ಕಂಡ ಬೆನ್ನಲ್ಲೇ, ಯಶವಂತಪುರದಲ್ಲಿ ಮತ್ತೊಂದು ಕಟ್ಟಡ ಕುಸಿಯುವ ಭೀತಿ ಎದುರಾಗಿದೆ.

ಒಂದಸ್ತಿನ ಕಟ್ಟಡ ವಾಲಿದ್ದು, ಕೆಲಭಾಗ ಕುಸಿದಿದೆ. ಅದೃಷ್ಟವಶಾತ್ ಮನೆಯಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ.

ಯಶವಂತಪುರ ವಾರ್ಡ್ ನಂ. 37 ರಲ್ಲಿ ಬಿ.ಕೆ. ನಗರದ ಸೊಸೈಟಿ ರಾಮಣ್ಣ ಎಂಬುವವರಿಗೆ ಸೇರಿದ ಕಟ್ಟಡ ಇದಾಗಿದೆ. ರಾಜಕಾಲುವೆ ಸಮೀಪದಲ್ಲೇ ಕಟ್ಟಡವಿದ್ದು, ಸತತ 40 ದಿನಗಳಿಂದ ಸುರಿದ ಮಳೆಯಿಂದಾಗಿ ಕಟ್ಟಡ ನೆನೆದು ಹಾನಿಯಾಗಿದೆ.

ಮನೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಕಟ್ಟಡ ಸಂಪೂರ್ಣ ಕುಸಿದಲ್ಲಿ ಪಕ್ಕದ ಕಟ್ಟಡಗಳಿಗೂ ಹಾನಿಯಾಗುವ ಸಾಧ್ಯತೆ ಇದೆ.

ಸ್ಥಳಕ್ಕೆ ಬಿ.ಬಿ.ಎಂ.ಪಿ. ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...