alex Certify
ಕನ್ನಡ ದುನಿಯಾ       Mobile App
       

Kannada Duniya

ನಡು ರಸ್ತೆಯಲ್ಲೇ ಹೊತ್ತಿ ಉರಿದ ಕಾರ್

ben-car

ಬೆಂಗಳೂರು: ಚಲಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿದ ಘಟನೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿ ನಡೆದಿದ್ದು, ಅದೃಷ್ಟವಶಾತ್ ಕಾರಿನ ಚಾಲಕ ಪಾರಾಗಿದ್ದಾರೆ.

ಭಾಸ್ಕರ್ ಎಂಬುವವರು ರಾತ್ರಿ ಮಾರುತಿ ಸ್ವಿಫ್ಟ್ ಕಾರ್ ನಲ್ಲಿ ತೆರಳುವಾಗ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದನ್ನು ಗಮನಿಸಿದ ವಾಹನ ಸವಾರರು ಭಾಸ್ಕರ್ ಗೆ ಮಾಹಿತಿ ನೀಡಿದ್ದಾರೆ.

ಭಾಸ್ಕರ್ ಕೂಡಲೇ ಕಾರಿನಿಂದ ಇಳಿದಿದ್ದು, ಕ್ಷಣಾರ್ಧದಲ್ಲಿ ವ್ಯಾಪಿಸಿದ ಬೆಂಕಿಯಿಂದ ಕಾರ್ ಸುಟ್ಟು ಭಸ್ಮವಾಗಿದೆ. ಘಟನೆಯಿಂದಾಗಿ ಕೆಲ ಕಾಲ ಸಂಚಾರಕ್ಕೆ ತೊಂದರೆಯಾಗಿದೆ.

ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿಯನ್ನು ನಂದಿಸಿದ್ದಾರೆ. ಈ ಸಂಬಂಧ ಅಶೋಕ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...