alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ರೌಡಿಗಳ ಅಟ್ಟಹಾಸ, ಬೆಚ್ಚಿಬಿದ್ದ ಜನ

ಬೆಂಗಳೂರಿನ ಕಾವಲ್ ಭೈರಸಂದ್ರದ ಮೋದಿ ಗಾರ್ಡನ್ ನಲ್ಲಿ ಪುಡಿ ರೌಡಿಗಳು ಅಟ್ಟಹಾಸ ಮೆರೆದಿದ್ದಾರೆ. 20 ಕ್ಕೂ ಅಧಿಕ ವಾಹನಗಳನ್ನು ಜಖಂಗೊಳಿಸಿದ್ದಾರೆ.

ರೌಡಿಶೀಟರ್ ಗಳಾದ ಅನಿಸ್, ಸುಭಾನ್ ಗ್ಯಾಂಗ್ ನವರು ಈ ಕೃತ್ಯವೆಸಗಿದ್ದಾರೆ ಎನ್ನಲಾಗಿದೆ. 4 ಬೈಕ್ ಗಳಲ್ಲಿ ಬಂದಿದ್ದ 10 ಕ್ಕೂ ಅಧಿಕ ಮಂದಿ ಪುಂಡರು, ಕಲ್ಲು, ದೊಣ್ಣೆಗಳಿಂದ ಕಾರುಗಳು, ಆಟೊ, ಬೈಕ್ ಗಳನ್ನು ಹಾನಿಗೊಳಿಸಿದ್ದಾರೆ.

ಇದಕ್ಕೆ ವಿರೋಧ ವ್ಯಕ್ತಪಡಿಸಿದ ಸಾರ್ವಜನಿಕರ ಮೇಲೆ ಹಲ್ಲೆ ಮಾಡಿ ದುಷ್ಕರ್ಮಿಗಳು ಪರಾರಿಯಾಗಿದ್ದಾರೆ. ಸ್ಥಳಕ್ಕೆ ಡಿ.ಜೆ. ಹಳ್ಳಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಹುಮತ ಪಡೆಯುತ್ತಾ ಬಿಜೆಪಿ...?

    View Results

    Loading ... Loading ...