alex Certify
ಕನ್ನಡ ದುನಿಯಾ       Mobile App
       

Kannada Duniya

ಸರಗಳ್ಳರ ಹಾವಳಿಗೆ ಬೆಚ್ಚಿಬಿದ್ದ ಬೆಂಗಳೂರು ಮಹಿಳೆಯರು

ಬೆಂಗಳೂರು: ಕೆಲವು ದಿನಗಳಿಂದ ತಣ್ಣಗಾಗಿದ್ದ ಸರಗಳ್ಳರ ಹಾವಳಿ ಮತ್ತೆ ಮಿತಿ ಮೀರಿದೆ. ರಾತ್ರಿ ಬೆಂಗಳೂರಿನಲ್ಲಿ ನಡೆದ 3 ಪ್ರತ್ಯೇಕ ಪ್ರಕರಣದಲ್ಲಿ ಮೂವರು ಮಹಿಳೆಯರ ಚಿನ್ನದ ಸರಗಳನ್ನು ದೋಚಲಾಗಿದೆ.

ಬ್ಲಾಕ್ ಪಲ್ಸರ್ ನಲ್ಲಿ ಬಂದಿದ್ದ ಖದೀಮರು, ಮಲ್ಲೇಶ್ವರಂನಲ್ಲಿ ಸುಧಾ ಎಂಬುವವರ ಸರವನ್ನು ದೋಚಿದ್ದಾರೆ. ಸರಸ್ವತಿ ನಗರದಲ್ಲಿ ಗೌರಿ ಎಂಬ ಮಹಿಳೆಯ ಸರವನ್ನು ದೋಚಿದ್ದು, ಅದೇ ರೀತಿ ಭೈರವೇಶ್ವರ ನಗರದಲ್ಲಿ ಮಹಿಳೆಯೊಬ್ಬರ ಸರ ಅಪಹರಿಸಲಾಗಿದೆ.

ಒಂದೇ ತಂಡದವರು ಈ ಕೃತ್ಯವನ್ನು ಎಸಗಿರುವ ಶಂಕೆ ಇದ್ದು, ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸರಗಳ್ಳರ ಪತ್ತೆಗೆ ಬಲೆ ಬೀಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...