alex Certify
ಕನ್ನಡ ದುನಿಯಾ       Mobile App
       

Kannada Duniya

3 ನೇ ಮಹಡಿಯಿಂದ ಬಿದ್ದು ಮಗು ಸಾವು

ಬೆಂಗಳೂರು: 3 ನೇ ಮಹಡಿಯಿಂದ ಕೆಳಗೆ ಬಿದ್ದು 18 ತಿಂಗಳ ಮಗು ಸಾವನ್ನಪ್ಪಿದ ದಾರುಣ ಘಟನೆ ನಾಗರಬಾವಿಯ ವಿನಾಯಕ ಲೇಔಟ್ ನಲ್ಲಿ ನಡೆದಿದೆ.

ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ಮೂಲದ ರೇಣುಕೇಶ್ –ಅನಿತಾ ದಂಪತಿಯ ಮಗಳು ಮೈತ್ರಿಯಾ ಮೃತಪಟ್ಟ ಮಗು ಎಂದು ತಿಳಿದು ಬಂದಿದೆ.

ಬಾಲ್ಕನಿಯಲ್ಲಿ ಮಗು ಆಟವಾಡುತ್ತಿದ್ದ ಸಂದರ್ಭದಲ್ಲಿ ತಾಯಿ ಅಡುಗೆ ಮನೆಯಲ್ಲಿದ್ದರು. ಮಗು ಬಿದ್ದ ಶಬ್ಧ ಕೇಳಿ ತಾಯಿ ಓಡಿಬಂದಿದ್ದಾರೆ. ಈ ವೇಳೆಗಾಗಲೇ ಮಗು ಕೆಳಗೆ ಬಿದ್ದು ಗಾಯಗೊಂಡಿದೆ. ಗಾಯಾಳು ಮಗುವನ್ನು ಆಸ್ಪತ್ರೆಗೆ ಸೇರಿಸಲಾಗಿತ್ತಾದರೂ, ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದೆ.

ಕೂಲಿ ಕೆಲಸಕ್ಕಾಗಿ ಬಂದಿದ್ದ ರೇಣುಕೇಶ್ ದಂಪತಿ ಬೆಂಗಳೂರಿನಲ್ಲಿ ನೆಲೆಸಿದ್ದರು. ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...