alex Certify
ಕನ್ನಡ ದುನಿಯಾ       Mobile App
       

Kannada Duniya

ಸಾವಿಗೆ ಕಾರಣವಾಯ್ತು ಮಟನ್ ಸಾರು

ಬೆಂಗಳೂರು: ಮಟನ್ ಸಾರು ಬೇಕೆಂದು ಪತ್ನಿಯೊಂದಿಗೆ ಜಗಳವಾಡಿದ ವ್ಯಕ್ತಿ ಕೊಲೆಗೀಡಾದ ಘಟನೆ ಬೆಂಗಳೂರಿನ ಕುಮಾರಸ್ವಾಮಿ ಲೇಔಟ್ ಪ್ರಗತಿಪುರದಲ್ಲಿ ನಡೆದಿದೆ.

ಗೋಪಾಲ್ ಕೊಲೆಯಾದ ವ್ಯಕ್ತಿ. ಆತನ ಪತ್ನಿಯೇ ಉಸಿರುಗಟ್ಟಿಸಿ ಕೊಲೆ ಮಾಡಿದ್ದು, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಕತೆ ಕಟ್ಟಿದ್ದಾಳೆ.

ಭಾನುವಾರ ಗೋಪಾಲ್ ಮದ್ಯಪಾನ ಮಾಡಿದ್ದು, ಮನೆಗೆ ಬರುವ ಮೊದಲು ಮಟನ್ ಸಾರು ಮಾಡುವಂತೆ ಪತ್ನಿಗೆ ತಿಳಿಸಿದ್ದಾನೆ. ಆದರೆ ಮನೆಗೆ ಬಂದು ಊಟಕ್ಕೆ ಕುಳಿತ ಆತನಿಗೆ ಪತ್ನಿ ಚಿಕನ್ ಸಾರು ಬಡಿಸಿದ್ದಾರೆ. ಇದೇ ವಿಚಾರಕ್ಕೆ ದಂಪತಿ ನಡುವೆ ಜಗಳವಾಗಿದ್ದು, ವಿಕೋಪಕ್ಕೆ ತಿರುಗಿದೆ.

ಕೋಪಗೊಂಡ ಪತ್ನಿ ಸೀರೆಯಿಂದ ಗೋಪಾಲ್ ಕುತ್ತಿಗೆ ಬಿಗಿದು ಉಸಿರುಗಟ್ಟಿಸಿ ಕೊಲೆ ಮಾಡಿ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ಹೇಳಿದ್ದಾಳೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ನಡೆಸಿದ ಸಂದರ್ಭದಲ್ಲಿ ಕೊಲೆ ವಿಚಾರ ಬೆಳಕಿಗೆ ಬಂದಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...