alex Certify
ಕನ್ನಡ ದುನಿಯಾ       Mobile App
       

Kannada Duniya

ಮಲ್ಯ ಆಸ್ಪತ್ರೆಯಿಂದ ಪರಾರಿಯಾದ ಉದ್ಯಮಿ ಮೊಮ್ಮಗ

ಬೆಂಗಳೂರು: ಮಲ್ಯ ಆಸ್ಪತ್ರೆಯ ಐ.ಸಿ.ಯು. ವಾರ್ಡ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಉದ್ಯಮಿ ದಿ. ಆದಿಕೇಶವುಲು ಅವರ ಮೊಮ್ಮಗ ವಿಷ್ಣು, ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ.

ಬೆಂಗಳೂರಿನ ಸೌತ್ ಎಂಡ್ ಸರ್ಕಲ್ ನಲ್ಲಿ ಅಡ್ಡಾದಿಡ್ಡಿಯಾಗಿ ಕಾರ್ ಚಾಲನೆ ಮಾಡಿದ್ದ ವಿಷ್ಣು, ಸರಣಿ ಅಪಘಾತಕ್ಕೆ ಕಾರಣನಾಗಿದ್ದ. ಆತನ ಮೇಲೆ ಸ್ಥಳದಲ್ಲಿದ್ದವರು ಹಲ್ಲೆ ನಡೆಸಿದ್ದು, ಈ ಸಂದರ್ಭದಲ್ಲಿ ಕಾರಿನಲ್ಲಿದ್ದ ನಟರಿಬ್ಬರು ಅಲ್ಲಿಂದ ಪರಾರಿಯಾಗಿದ್ದಾಗಿ ಹೇಳಲಾಗಿತ್ತು.

ವಿಷ್ಣುನನ್ನು ಮಲ್ಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲದೇ, ಅಪಘಾತಕ್ಕೆ ಕಾರಣವಾದ ಐಷಾರಾಮಿ ಕಾರಿನಲ್ಲಿ ಮಾದಕ ವಸ್ತು ಪತ್ತೆಯಾಗಿದ್ದು, ಜಯನಗರ ಠಾಣೆ ಪೊಲೀಸರು ಕ್ರಮ ಕೈಗೊಂಡಿದ್ದರು.

ಪೊಲೀಸರ ವಶದಲ್ಲಿದ್ದ ವಿಷ್ಣು ಬೆಳಿಗ್ಗೆ ಮಲ್ಯ ಆಸ್ಪತ್ರೆಯ ತುರ್ತು ನಿರ್ಗಮನ ದ್ವಾರದ ಮೂಲಕ ಪರಾರಿಯಾಗಿದ್ದಾನೆ. ಪೊಲೀಸರು ವಿಷ್ಣುವಿನ ಹೇಳಿಕೆ ಪಡೆಯಲು ಹೋಗಿದ್ದ ಸಂದರ್ಭದಲ್ಲಿ ಆತ ಪರಾರಿಯಾಗಿರುವುದು ಗೊತ್ತಾಗಿದೆ. ಪೊಲೀಸ್ ವಶದಲ್ಲಿದ್ದ ವಿಷ್ಣು ಪರಾರಿಯಾಗಿರುವುದು ಅನುಮಾನಕ್ಕೆ ಕಾರಣವಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...