alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಲ್ಲಿ ಭಾರೀ ಬೆಂಕಿ ದುರಂತ

ಬೆಂಗಳೂರು: ಬೆಂಗಳೂರು ಕೋಣನಕುಂಟೆಯಲ್ಲಿರುವ ಲೊವೆಬಲ್ ಲಾಂಜರಿ ಗಾರ್ಮೆಂಟ್ ಕಟ್ಟಡಕ್ಕೆ ಬೆಂಕಿ ತಗುಲಿ ಅಪಾರ ನಷ್ಟವಾಗಿದೆ.

4 ಅಂತಸ್ತಿನ ಕಟ್ಟಡದಲ್ಲಿ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ತಗುಲಿದ್ದು, ಕ್ಷಣಾರ್ಧದಲ್ಲಿ ಇಡೀ ಕಟ್ಟಡಕ್ಕೆ ವ್ಯಾಪಿಸಿದ್ದು, ಯಂತ್ರೋಪಕರಣ, ಕಚ್ಚಾ ಸಾಮಗ್ರಿ, ಬಟ್ಟೆಗಳು ಸಂಪೂರ್ಣ ಸುಟ್ಟು ಹೋಗಿವೆ.

20 ಕ್ಕೂ ಅಧಿಕ ಅಗ್ನಿಶಾಮಕ ವಾಹನಗಳ ನೂರಾರು ಸಿಬ್ಬಂದಿ ಸತತ ಕಾರ್ಯಾಚರಣೆ ನಡೆಸಿ ಬೆಂಕಿಯನ್ನು ತಹಬದಿಗೆ ತಂದಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕುಮಾರಸ್ವಾಮಿ ಲೇಔಟ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Subscribe Newsletter

Get latest updates on your inbox...

Opinion Poll

  • ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮಂಡಿಸಿರುವ ಬಜೆಟ್ ಚುನಾವಣಾ ಗಿಮಿಕ್...?

    View Results

    Loading ... Loading ...