alex Certify
ಕನ್ನಡ ದುನಿಯಾ       Mobile App
       

Kannada Duniya

ರಾಜಧಾನಿಯಲ್ಲಿ ಮತ್ತೆ ರಿವಾಲ್ವರ್ ಸದ್ದು

ಬೆಂಗಳೂರು: ರಾಜಧಾನಿಯಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಮಗುವನ್ನು ಅಪಹರಿಸಿ, ಹಣಕ್ಕೆ ಬೇಡಿಕೆ ಇಟ್ಟಿದ್ದ ಅಪಹರಣಕಾರನ ಮೇಲೆ ಗುಂಡು ಹಾರಿಸಲಾಗಿದೆ.

2 ದಿನಗಳ ಹಿಂದೆ ಬೆಂಗಳೂರು ಕೆ.ಪಿ. ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ರಾಜೇಶ್ ಎಂಬುವವರ ಪುತ್ರ ಚಂದನ್(5)ನನ್ನು ಅಪಹರಿಸಿದ್ದು, 30 ಲಕ್ಷ ರೂ.ಗೆ ಬೇಡಿಕೆ ಇಡಲಾಗಿತ್ತು.

ಪ್ರಕರಣದ ತನಿಖೆ ಕೈಗೊಂಡ ಪೊಲೀಸರು ಅಭಿಷೇಕ್ ಎಂಬುವವನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಆತ ನೀಡಿದ ಮಾಹಿತಿ ಮೇರೆಗೆ ಕೆಂಗೇರಿ ಸಮೀಪ ಕಾರಿನಲ್ಲಿದ್ದ ಅಪಹರಣಕಾರರ ಬಂಧನಕ್ಕೆ ತೆರಳಿದಾಗ, ಕಿಡ್ನಾಪರ್ ದಿವ್ಯತೇಜ್ ಎಂಬಾತ ಡ್ರ್ಯಾಗರ್ ನಿಂದ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ.

ಆತ್ಮರಕ್ಷಣೆಗಾಗಿ ಪೊಲೀಸರು ಫೈರಿಂಗ್ ಮಾಡಿದ್ದಾರೆ. ದಿವ್ಯತೇಜ್ ಬಲಗಾಲಿಗೆ ಗುಂಡು ಹೊಕ್ಕಿದ್ದು, ಆತ ಸೇರಿದಂತೆ ನಾಲ್ವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಬಾಲಕನನ್ನು ರಕ್ಷಿಸಿರುವ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ. ಪೊಲೀಸರ ಸಕಾಲಿಕ ಕ್ರಮದಿಂದಾಗಿ ಅಪಹರಣ ಪ್ರಕರಣ ಸುಖಾಂತ್ಯ ಕಂಡಿದೆ. ಗುಂಡೇಟು ತಗುಲಿದ ದಿವ್ಯತೇಜ್ ನನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...