alex Certify
ಕನ್ನಡ ದುನಿಯಾ       Mobile App
       

Kannada Duniya

ಅಪಹರಣಕಾರರ ತಂಡದ ಮೇಲೆ ಫೈರಿಂಗ್

ben-kidnp-fir

ಬೆಂಗಳೂರು: ಬೆಂಗಳೂರಿನಲ್ಲಿ ಅಪಹರಣಕಾರರ ತಂಡದ ಮೇಲೆ ಪೊಲೀಸರು ಫೈರಿಂಗ್ ಮಾಡಿದ್ದಾರೆ. ಉದ್ಯಮಿಗಳನ್ನು ಅಪಹರಿಸಿ ಸುಲಿಗೆ ಮಾಡುತ್ತಿದ್ದ ತಂಡವನ್ನು ಬಂಧಿಸಲು ಬ್ಯಾಡರಹಳ್ಳಿ ಠಾಣೆ ಪೊಲೀಸರು ತೆರಳಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ.

ಅಪಹರಣಕಾರರ ತಂಡದ ಮುಖ್ಯಸ್ಥ ವಿಜಯ್ ಗೆ ಗುಂಡೇಟು ತಗುಲಿದೆ. 5 ಮಂದಿ ಅಪಹರಣಕಾರರನ್ನು ಪೊಲೀಸರು ಬಂಧಿಸಿದ್ದಾರೆ.

ಅಪಹರಣಕಾರರು ಕಾಮಾಕ್ಷಿಪಾಳ್ಯದ ಲಕ್ಷ್ಮಿನಾರಾಯಣ ಆಚಾರ್, ಮಾದನಾಯಕನಹಳ್ಳಿಯ ಮೊಹಮ್ಮದ್ ಶರೀಫ್, ವೈಟ್ ಫೀಲ್ಡ್ ನ ಸುಧಾಕರ್ ಅವರನ್ನು ಅಪಹರಿಸಿ, ಹಣ ಪಡೆದು ಬಿಡುಗಡೆ ಮಾಡಿದ್ದರೆನ್ನಲಾಗಿದೆ.

ಅಪಹರಣಕಾರರು ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿರುವ ಮಾಹಿತಿ ಪಡೆದ ಪೊಲೀಸರು ಬಂಧನಕ್ಕೆ ತೆರಳಿದ್ದ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಯತ್ನಿಸಿದ್ದು, ಆಗ ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...