alex Certify
ಕನ್ನಡ ದುನಿಯಾ       Mobile App
       

Kannada Duniya

ರೌಡಿಶೀಟರ್ ಮೇಲೆ ಪೊಲೀಸರ ಫೈರಿಂಗ್

ಬೆಂಗಳೂರು: ಬಂಧಿಸಲು ತೆರಳಿದ್ದ ವೇಳೆ ಪೊಲೀಸರ ಮೇಲೆಯೇ, ಹಲ್ಲೆಗೆ ಯತ್ನಿಸಿದ ಕೊಲೆ ಆರೋಪಿ ಮೇಲೆ ಫೈರಿಂಗ್ ಮಾಡಲಾಗಿದೆ.

ಬೆಂಗಳೂರು ಕೋಣನಕುಂಟೆಯ ಜಂಬೂಸವಾರಿ ದಿಣ್ಣೆ ಬಳಿ ಘಟನೆ ನಡೆದಿದ್ದು, ಸಂತೋಷ್ ಅಲಿಯಾಸ್ ಪಳನಿ ಕಾಲಿಗೆ ಗುಂಡೇಟು ಬಿದ್ದಿದ್ದು, ಪೊಲೀಸರು ಆತನನ್ನು ವಶಕ್ಕೆ ಪಡೆದು ಆಸ್ಪತ್ರೆಗೆ ಸೇರಿಸಿದ್ದಾರೆ.

ಕೋಣನಕುಂಟೆ ಪೊಲೀಸ್ ಠಾಣೆ ವ್ಯಾಪ್ತಿಯ ರೌಡಿಶೀಟರ್ ಆಗಿರುವ ಪಳನಿ, ಇತ್ತೀಚೆಗೆ ನಡೆದ ಕೊಲೆ ಪ್ರಕರಣದಲ್ಲಿ ಭಾಗಿಯಾಗಿರುವ ಮಾಹಿತಿ ಪೊಲೀಸರಿಗೆ ಗೊತ್ತಾಗಿದೆ.

ತಡರಾತ್ರಿ ಪೊಲೀಸರ ತಂಡ ಆತನನ್ನು ಬಂಧಿಸಲು ತೆರಳಿದ್ದು, ಮಾರಕಾಸ್ತ್ರಗಳಿಂದ ಪಳನಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾನೆ. ಆಗ ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಧರ್ಮೇಂದ್ರ ಫೈರಿಂಗ್ ಮಾಡಿದ್ದಾರೆ. ಗಾಯಗೊಂಡಿರುವ ಪೊಲೀಸ್ ಹಾಗೂ ಪಳನಿಯನ್ನು ಆಸ್ಪತ್ರೆಗೆ ಸೇರಿಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...