alex Certify
ಕನ್ನಡ ದುನಿಯಾ       Mobile App
       

Kannada Duniya

ರೌಡಿಶೀಟರ್ ಮೇಲೆ ಪೊಲೀಸರಿಂದ ಫೈರಿಂಗ್

ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಗುಂಡಿನ ಸದ್ದು ಮೊಳಗಿದೆ. ಪೊಲೀಸರ ಮೇಲೆಯೇ ಹಲ್ಲೆ ನಡೆಸಿ ಪರಾರಿಯಾಗಲೆತ್ನಿಸಿದ ರೌಡಿಶೀಟರ್ ಮೇಲೆ ಸಿ.ಸಿ.ಬಿ. ಪೊಲೀಸರು ಫೈರಿಂಗ್ ಮಾಡಿದ್ದಾರೆ.

ರೌಡಿಶೀಟರ್ ರಾಜುದೊರೈ ಕಾಲಿಗೆ ಗುಂಡೇಟು ಬಿದ್ದಿದ್ದು, ಆಸ್ಪತ್ರೆಗೆ ಸೇರಿಸಲಾಗಿದೆ. ಹಲವು ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರಾಜುದೊರೈನನ್ನು ಸೋಲದೇವನಹಳ್ಳಿ ಬಳಿ ಪೊಲೀಸರು ಬಂಧಿಸಲು ಮುಂದಾಗಿದ್ದಾರೆ.

ಈ ವೇಳೆ ಪೇದೆ ನರಸಿಂಹಮೂರ್ತಿ ಅವರ ಮೇಲೆ ರಾಜು ಹಲ್ಲೆ ನಡೆಸಿ ಪರಾರಿಯಾಗಲು ಯತ್ನಿಸಿದ್ದು, ಆತ್ಮರಕ್ಷಣೆಗಾಗಿ ಇನ್ಸ್ ಪೆಕ್ಟರ್ ಪ್ರಕಾಶ್ ಫೈರಿಂಗ್ ಮಾಡಿದ್ದಾರೆ.

ರಾಜು ಎಡಗಾಲಿಗೆ ಗುಂಡು ಬಿದ್ದಿದೆ. ಗಾಯಗೊಂಡಿರುವ ಪೇದೆ ನರಸಿಂಹ ಮೂರ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ರಾಜುನನ್ನು ಪೊಲೀಸರು ವಶಕ್ಕೆ ಪಡೆದು ಆಸ್ಪತ್ರೆಗೆ ದಾಖಲಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ರಿಯಲ್ ಸ್ಟಾರ್ ಉಪೇಂದ್ರರ ಕರ್ನಾಟಕ ಪ್ರಜ್ಞಾವಂತ ಜನತಾ ಪಾರ್ಟಿಗೆ ಜನ ಬೆಂಬಲ ಸಿಗಲಿದೆಯೇ..?

    View Results

    Loading ... Loading ...