alex Certify
ಕನ್ನಡ ದುನಿಯಾ       Mobile App
       

Kannada Duniya

ಬೆಂಗಳೂರಿನಲ್ಲಿ ರೌಡಿಶೀಟರ್ ಗೆ ಗುಂಡೇಟು

ಬೆಂಗಳೂರು: ಬೆಂಗಳೂರು ಕಾಟನ್ ಪೇಟೆ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ ರೌಡಿಶೀಟರ್ ಮೇಲೆ ಫೈರಿಂಗ್ ಮಾಡಲಾಗಿದೆ.

ರೂಪೇಶ್ ಅಲಿಯಾಸ್ ನಿರ್ಮಲ್ ಕಾಲಿಗೆ ಗುಂಡೇಟು ತಗುಲಿದೆ. ಕೊಲೆ, ಸುಲಿಗೆ ಪ್ರಕರಣಗಳಲ್ಲಿ ಪೊಲೀಸರಿಗೆ ಬೇಕಾಗಿದ್ದ ರೂಪೇಶ್, 3 ವರ್ಷಗಳಿಂದ ತಲೆಮರೆಸಿಕೊಂಡಿದ್ದ. ಬೆಳಗಿನ ಜಾವ ಆತನನ್ನು ಪೊಲೀಸರು ಬಂಧಿಸಲು ತೆರಳಿದ್ದ ಸಂದರ್ಭದಲ್ಲಿ ಪೊಲೀಸರಾದ ರೆಹಮಾನ್ ಮತ್ತು ಕುಮಾರ್ ಅವರ ಮೇಲೆ ರೂಪೇಶ್ ಹಲ್ಲೆ ಮಾಡಿದ್ದಾನೆ.

ಆಗ ಆತ್ಮರಕ್ಷಣೆಗಾಗಿ ಪೊಲೀಸ್ ಇನ್ಸ್ ಪೆಕ್ಟರ್ 2 ಸುತ್ತು ಫೈರಿಂಗ್ ಮಾಡಿದ್ದಾರೆ. ಕಾಲಿಗೆ ಗುಂಡೇಟು ತಗುಲಿ ಗಾಯಗೊಂಡಿರುವ ರೂಪೇಶ್ ಹಾಗೂ ಪೊಲೀಸರಿಬ್ಬರನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...