alex Certify
ಕನ್ನಡ ದುನಿಯಾ       Mobile App
       

Kannada Duniya

ಶಾಕಿಂಗ್! ಅಮಲಿನಲ್ಲಿ ಸ್ನೇಹಿತನಿಂದಲೇ ನಡೀತು ಇಂತಹ ಕೃತ್ಯ

ಬೆಂಗಳೂರು: ಮದ್ಯದ ಅಮಲಿನಲ್ಲಿ ಯುವಕನೊಬ್ಬ, ಸ್ನೇಹಿತನನ್ನೇ ಕೊಲೆ ಮಾಡಿದ ಘಟನೆ ಬೆಂಗಳೂರಿನ ತರಲಘಟ್ಟಪುರದ ಅಂಜನಾಪುರದಲ್ಲಿ ನಡೆದಿದೆ.

ಇಟ್ಟಿಗೆ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ವಿಜಯಪುರ ಮೂಲದ ಸಂಜೀವ(19) ಕೊಲೆಯಾದ ಯುವಕ. ಆತನ ಸ್ನೇಹಿತನೇ ಆಗಿರುವ ಕಾರ್ತಿಕ್ ಕೊಲೆ ಆರೋಪಿಯಾಗಿದ್ದಾನೆ.

ಕಾರ್ತಿಕ್ ಮದ್ಯ ಸೇವನೆ ಮಾಡಿ ಸಂಜೀವನೊಂದಿಗೆ ಜಗಳವಾಡಿದ್ದು, ಜಗಳ ವಿಕೋಪಕ್ಕೆ ತಿರುಗಿ ಚಾಕುವಿನಿಂದ ಸಂಜೀವನಿಗೆ ಇರಿದಿದ್ದಾನೆ.

ತೀವ್ರ ರಕ್ತಸ್ರಾವದಿಂದ ಸಂಜೀವ ಸ್ಥಳದಲ್ಲೇ ಸಾವನ್ನಪ್ಪಿದ್ದು, ತರಲಘಟ್ಟಪುರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಆರೋಪಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...