alex Certify
ಕನ್ನಡ ದುನಿಯಾ       Mobile App
       

Kannada Duniya

ಗಣಪತಿ ಮೆರವಣಿಗೆಯಲ್ಲಿ ಆಘಾತಕಾರಿ ಘಟನೆ

ಬೆಂಗಳೂರು: ಗಣಪತಿ ಹಬ್ಬದ ಸಂದರ್ಭದಲ್ಲಿಯೇ ನಡೆಯಬಾರದ ಘಟನೆಯೊಂದು ಬೆಂಗಳೂರಿನ ಕುರುಬರಹಳ್ಳಿಯಲ್ಲಿ ನಡೆದಿದೆ.

ಕುರುಬರಹಳ್ಳಿಯ 11 ನೇ ಕ್ರಾಸ್ ಯುವಕರ ಸಂಘದಿಂದ ಪ್ರತಿಷ್ಠಾಪಿಸಲಾಗಿದ್ದ ಗಣಪತಿಯ ವಿಸರ್ಜನಾ ಪೂರ್ವ ಮೆರವಣಿಗೆಯ ವೇಳೆ 407 ವಾಹನ ಜನರ ಮೇಲೆ ಅಡ್ಡಾದಿಡ್ಡಿಯಾಗಿ ನುಗ್ಗಿದೆ.

11 ವರ್ಷದ ಬಾಲಕ ವೆಂಕಟೇಶ್ ಮೃತಪಟ್ಟಿದ್ದು, 10 ಮಂದಿಗೆ ಗಾಯಗಳಾಗಿವೆ. ವಾಹನದ ಬ್ರೇಕ್ ಫೇಲ್ ಆಗಿದ್ದು, ಮದ್ಯಪಾನ ಮಾಡಿದ್ದ ಚಾಲಕನ ನಿಯಂತ್ರಣ ತಪ್ಪಿ ಮೆರವಣಿಗೆಯಲ್ಲಿದ್ದ ಜನರ ಮೇಲೆ ನುಗ್ಗಿದೆ ಎನ್ನಲಾಗಿದೆ.

ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ ಸಂಚಾರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ವಾಹನ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...