alex Certify
ಕನ್ನಡ ದುನಿಯಾ       Mobile App
       

Kannada Duniya

ಬ್ಯೂಟಿ ಪಾರ್ಲರ್ ನಲ್ಲಿ ವಿದ್ಯಾರ್ಥಿನಿಗೆ ಲೈಂಗಿಕ ದೌರ್ಜನ್ಯ

ಬೆಂಗಳೂರು: ಬ್ಯೂಟಿ ಪಾರ್ಲರ್ ಗೆ ತೆರಳಿದ್ದ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಕಾಮುಕನನ್ನು ಯಶವಂತಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಸೌದಿ ಅರೇಬಿಯಾದ ವಿದ್ಯಾರ್ಥಿನಿ ಬೆಂಗಳೂರಿನ ಪ್ರತಿಷ್ಠಿತ ಇಂಜಿನಿಯರಿಂಗ್ ಕಾಲೇಜ್ ನಲ್ಲಿ ಓದುತ್ತಿದ್ದು, ಕಾಲೇಜ್ ಫೆಸ್ಟ್ ಇದ್ದ ಕಾರಣ ಬ್ಯೂಟಿ ಪಾರ್ಲರ್ ಗೆ ತೆರಳಿದ್ದಾರೆ. ಈ ವೇಳೆ ಬ್ಯೂಟಿಷಿಯನ್ ಲಕ್ಕಿಸಿಂಗ್ ಎಂಬಾತ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.

ಬ್ಯೂಟಿಷಿಯನ್ ಕೃತ್ಯದ ಬಗ್ಗೆ ವಿದ್ಯಾರ್ಥಿನಿ ಗೆಳತಿಯರ ಬಳಿ ತಿಳಿಸಿದ್ದು, ಅವರ ನೆರವಿನಿಂದ ಠಾಣೆಗೆ ಆಗಮಿಸಿ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾಮುಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...