alex Certify
ಕನ್ನಡ ದುನಿಯಾ       Mobile App
       

Kannada Duniya

ನಡುರಸ್ತೆಯಲ್ಲೇ ನಡೆದಿದೆ ಬೆಚ್ಚಿ ಬೀಳುವ ಘಟನೆ

ಬೆಂಗಳೂರು: ಬೆಂಗಳೂರಿನಲ್ಲಿ ಪುಂಡರ ಹಾವಳಿ ಮಿತಿ ಮೀರಿದೆ. ತಮ್ಮ ಪಾಡಿಗೆ ತಾವು ನಡೆದುಕೊಂಡು ಹೋಗುತ್ತಿದ್ದ ಯುವತಿಯರಿಗೆ ಕಾಲಿನಿಂದ ಒದ್ದು, ಅಸಭ್ಯವಾಗಿ ವರ್ತಿಸಿದ ಘಟನೆ ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯ ಲಿಂಗರಾಜಪುರ ಕರಿಯಣ್ಣನ ಪಾಳ್ಯದಲ್ಲಿ ನಡೆದಿದೆ.

ಯುವತಿಯರಿಬ್ಬರು ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗುವಾಗ, ಯುವಕರಿಬ್ಬರು ಬೈಕ್ ನಲ್ಲಿ ಬಂದಿದ್ದಾರೆ. ಹಿಂಬದಿ ಸವಾರ ಕಾಲು ಚಾಚಿಕೊಂಡಿದ್ದು, ಆತನ ಕಾಲು ಯುವತಿಯರಿಗೆ ತಾಗಿದೆ.

ಇದರಿಂದ ಯುವತಿಯರ ಎದೆ ಮತ್ತು ಬೆನ್ನಿಗೆ ಪೆಟ್ಟಾಗಿದ್ದು, ಇಬ್ಬರೂ ಅಲ್ಲೇ ಬಿದ್ದಿದ್ದಾರೆ. ಸ್ಥಳೀಯರು ಯುವತಿಯರನ್ನು ಆಸ್ಪತ್ರೆಗೆ ಸೇರಿಸಿದ್ದಾರೆ. ಬಾಣಸವಾಡಿ ಠಾಣೆ ಪೊಲೀಸರಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸರು ದುಷ್ಕರ್ಮಿಗಳ ಬಂಧನಕ್ಕೆ ಬಲೆ ಬೀಸಿದ್ದಾರೆ.

ಈ ಭಾಗದಲ್ಲಿ ಪುಂಡರ ಹಾವಳಿ ಅತಿಯಾಗಿದ್ದು, ಪೊಲೀಸರು ಕಡಿವಾಣ ಹಾಕಬೇಕೆಂದು ಸ್ಥಳೀಯರು ಒತ್ತಾಯಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...