alex Certify
ಕನ್ನಡ ದುನಿಯಾ       Mobile App
       

Kannada Duniya

ನಡುರಸ್ತೆಯಲ್ಲೇ ಲೈಂಗಿಕ ಕಿರುಕುಳ

ಬೆಂಗಳೂರು: ನಡುರಸ್ತೆಯಲ್ಲೇ ಯುವತಿಗೆ ಕಿರುಕುಳ ನೀಡಿದ ಘಟನೆ ಬೆಂಗಳೂರಿನ ಇಂದಿರಾನಗರದ ಸಿಂಡಿಕೇಟ್ ಬ್ಯಾಂಕ್ ಬಳಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

5 ದಿನಗಳ ಹಿಂದೆ ಯುವತಿಯೊಬ್ಬರು ನಡೆದುಕೊಂಡು ತೆರಳುವಾಗ, ಬಳಿಗೆ ಬಂದ ದುಷ್ಕರ್ಮಿಯೊಬ್ಬ ಬ್ಯಾಗ್ ಹಿಡಿದು ಎಳೆದಿದ್ದಾನೆ.

ಆತನಿಗೆ ಬ್ಯಾಗ್ ಕೊಡಲು ನಿರಾಕರಿಸಿದ ಯುವತಿ ಪ್ರತಿರೋಧ ತೋರಿದ್ದಾರೆ. ಆಗ ದುಷ್ಕರ್ಮಿ ಯುವತಿಯನ್ನು ಸ್ಪರ್ಶಿಸಿ ಅನುಚಿತವಾಗಿ ವರ್ತಿಸಿದ್ದಾನೆ ಎನ್ನಲಾಗಿದೆ.

ಯುವತಿ ಇಂದಿರಾನಗರ ಠಾಣೆ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ದುಷ್ಕರ್ಮಿಯ ಬಂಧನಕ್ಕೆ ಬಲೆ ಬೀಸಿದ್ದಾರೆ ಎಂದು ಹೇಳಲಾಗಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...