alex Certify
ಕನ್ನಡ ದುನಿಯಾ       Mobile App
       

Kannada Duniya

ವೈಭವದಿಂದ ನಡೆದ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರು ಕರಗ ಮಹೋತ್ಸವ ಸಡಗರ, ಸಂಭ್ರಮದಿಂದ ನೆರವೇರಿದೆ. ರಾತ್ರಿ ನಡೆದ ಕರಗ ಮಹೋತ್ಸವವನ್ನು ಲಕ್ಷಾಂತರ ಭಕ್ತರು ಕಣ್ತುಂಬಿಕೊಂಡಿದ್ದಾರೆ. ರಾತ್ರಿ 1 ಗಂಟೆಗೆ ಆರಂಭವಾಗಬೇಕಿದ್ದ ಕರಗ ವಿಳಂಬವಾಗಿ ಆರಂಭವಾಗಿದ್ದು, ಜನ ಕಾದು ಕಾದು ಸುಸ್ತಾಗಿದ್ದಾರೆ.

ಬೆಂಗಳೂರು ಕರಗ ಮಹೋತ್ಸವಕ್ಕೆ ನೂರಾರು ವರ್ಷಗಳ ಇತಿಹಾಸವಿದೆ. ರಾತ್ರಿ ಧರ್ಮರಾಯ ಸ್ವಾಮಿ ದೇವಾಲಯದಲ್ಲಿ ವಿವಿಧ ಧಾರ್ಮಿಕ ಕಾರ್ಯಗಳನ್ನು ನೆರವೇರಿಸಿ ಕರಗ ಮಹೋತ್ಸವ ಆರಂಭವಾಗಿದ್ದು, ವೈಭವದ ಮೆರವಣಿಗೆಯ ದೃಶ್ಯವನ್ನು ಭಕ್ತರು ಕಣ್ತುಂಬಿಕೊಂಡು ಭಾವಪರವಶರಾಗಿದ್ದಾರೆ.

ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಗಿದೆ. ಕಾಟನ್ ಪೇಟೆ, ಬಳೆಪೇಟೆ, ದೊಡ್ಡಪೇಟೆ ಮೊದಲಾದ ಕಡೆಗಳಲ್ಲಿ ಸಾಗಿದ ಕರಗ ವಾಪಸ್ ಧರ್ಮರಾಯನ ದೇವಾಲಯಕ್ಕೆ ಆಗಮಿಸುವುದರೊಂದಿಗೆ ಮೆರವಣಿಗೆ ಮುಕ್ತಾಯವಾಗಲಿದೆ.

ಕರಗ ಮಹೋತ್ಸವ ಹಿನ್ನಲೆಯಲ್ಲಿ ವಾಹನಗಳ ಸಂಚಾರ ಮಾರ್ಗದಲ್ಲಿ ಬದಲಾವಣೆ ಮಾಡಲಾಗಿತ್ತು. ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು. ಮೆರವಣಿಗೆ ಸಾಗುವ ರಸ್ತೆಗಳನ್ನು ಅಲಂಕರಿಸಲಾಗಿತ್ತು.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...