alex Certify
ಕನ್ನಡ ದುನಿಯಾ       Mobile App
       

Kannada Duniya

ಹೊಸ ವರ್ಷಕ್ಕೆ ಮದ್ಯಪ್ರಿಯರಿಗೆ ಗುಡ್ ನ್ಯೂಸ್

ಬೆಂಗಳೂರು: ಹೊಸ ವರ್ಷಾಚರಣೆಯಂದು ಮದ್ಯ ನಿಷೇಧವಾಗುತ್ತೆ ಎಂದುಕೊಂಡಿದ್ದವರಿಗೆ ಖುಷಿ ಸುದ್ದಿ ಇಲ್ಲಿದೆ. ಮದ್ಯ ಮಾರಾಟಕ್ಕೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಬೆಂಗಳೂರಿನ ನಾಗೇಶ್ ಅವರು, ಹೊಸ ವರ್ಷಾಚರಣೆಯ ವೇಳೆ ಅಹಿತಕರ ಘಟನೆ ನಡೆದು ಬೆಂಗಳೂರಿನ ಹೆಸರಿಗೆ ಕಳಂಕ ಬರುತ್ತದೆ ಎಂಬ ಕಾರಣದಿಂದ ಮದ್ಯ ನಿಷೇಧಿಸಬೇಕೆಂದು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ಕುರಿತಾಗಿ ಉತ್ತರಿಸುವಂತೆ ರಾಜ್ಯಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿತ್ತು.

ಯಾವುದೇ ಅಹಿತಕರ ಘಟನೆ ನಡೆಯದಂತೆ ಸರ್ಕಾರ ಭರವಸೆ ನೀಡಿದ ಹಿನ್ನಲೆಯಲ್ಲಿ ಅರ್ಜಿಯನ್ನು ಇತ್ಯರ್ಥಗೊಳಿಸಿದ ಕೋರ್ಟ್, ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚಿಸಿದೆ.

ಡಿಸೆಂಬರ್ 31 ಮತ್ತು ಜನವರಿ 1 ರಂದು ಮದ್ಯ ಮಾರಾಟ ನಿಷೇಧಿಸಬೇಕೆಂದು ಕೋರಲಾಗಿದ್ದ ಅರ್ಜಿಯನ್ನು ಇತ್ಯರ್ಥಗೊಳಿಸಿ, ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳಲು ತಿಳಿಸಿದೆ.

ಹೊಸ ವರ್ಷಾಚರಣೆ ಸಂದರ್ಭದಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಕ್ರಮ ಕೈಗೊಳ್ಳಲಾಗುವುದು. ಭದ್ರತೆಗೆ ಹೆಚ್ಚಿನ ಪೊಲೀಸರನ್ನು ನಿಯೋಜಿಸಲಾಗುವುದು ಎಂದು ಬೆಂಗಳೂರು ಪೊಲೀಸ್ ಕಮಿಷನರ್ ಕೋರ್ಟ್ ಗೆ ತಿಳಿಸಿದ್ದಾರೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...