alex Certify
ಕನ್ನಡ ದುನಿಯಾ       Mobile App
       

Kannada Duniya

ಸಿಗರೇಟ್ ಸೇದ್ತೀರಾ? ಹಾಗಾದ್ರೆ ಈ ಸುದ್ದಿ ಓದಿ ಬೆಚ್ಚಿ ಬೀಳ್ತಿರಾ…!

ಸಿಗರೇಟು ಸೇದುವ ಚಟ ಯುವಕನೊಬ್ಬನಿಗೆ ಭಾರೀ ದುಬಾರಿಯಾಗಿ ಪರಿಣಮಿಸಿದೆ. ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದಿದ ತಪ್ಪಿಗೆ ಆತ ಈಗ 25 ಸಾವಿರ ರೂಪಾಯಿ ದಂಡ ಪಾವತಿಸುವಂತಾಗಿದೆ.

ಬೆಂಗಳೂರಿನಲ್ಲಿ ಈ ಘಟನೆ ನಡೆದಿದ್ದು, ಚಂದನ್ ಎಂಬ 24 ವರ್ಷದ ಯುವಕ ಜಯನಗರದ 9 ನೇ ಬ್ಲಾಕ್ ನ ಬ್ರಹ್ಮಶ್ರೀ ಕಾಂಡಿಮೆಂಟ್ಸ್ ಬಳಿ ಸಿಗರೇಟು ಸೇದುತ್ತಾ ನಿಂತಿದ್ದರು.

ಈ ಸಂದರ್ಭದಲ್ಲಿ ಅದೇ ಮಾರ್ಗದಲ್ಲಿ ಸಾಗುತ್ತಿದ್ದ ಸಬ್ ಇನ್ಸ್ಪೆಕ್ಟರ್ ತಿಮ್ಮರಾಜು ಅವರ ಕಣ್ಣಿಗೆ ಚಂದನ್ ಸಾರ್ವಜನಿಕ ಪ್ರದೇಶದಲ್ಲಿ ಸಿಗರೇಟು ಸೇದುತ್ತಿರುವುದು ಕಂಡು ಬಂದಿದೆ.

ಕೂಡಲೇ ಚಂದನ್ ಬಳಿ ತೆರಳಿದ ತಿಮ್ಮರಾಜು, ಸಾರ್ವಜನಿಕ ಸ್ಥಳದಲ್ಲಿ ಸಿಗರೇಟು ಸೇದಿದ ಕಾರಣಕ್ಕೆ 200 ರೂ. ದಂಡ ವಿಧಿಸಿದ್ದಾರೆ. ಆದರೆ ದಂಡ ಕಟ್ಟಲು ನಿರಾಕರಿಸಿದ ಚಂದನ್, ಸಬ್ ಇನ್ಸ್ಪೆಕ್ಟರ್ ಜೊತೆ ವಾಗ್ವಾದಕ್ಕೆ ಇಳಿದಿದ್ದಲ್ಲದೆ ಆಕಸ್ಮಿಕವಾಗಿ ಅವರಿಗೆ ತನ್ನ ಕೈ ತಾಗಿಸಿದ್ದು ಇದರಿಂದಾಗಿ ತಿಮ್ಮರಾಜು ಕೆಳಗೆ ಬಿದ್ದಿದ್ದಾರೆ.

ತಿಮ್ಮರಾಜು ತಕ್ಷಣವೇ ಗಸ್ತು ವಾಹನದವರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಬಂದ ಅವರು ಚಂದನ್ ರನ್ನು ತಿಲಕ್ ನಗರ ಪೊಲೀಸ್ ಠಾಣೆಗೆ ಕರೆದೊಯ್ದಿದ್ದು, ಸಮವಸ್ತ್ರದಲ್ಲಿದ್ದ ಕರ್ತವ್ಯನಿರತ ಅಧಿಕಾರಿ ಮೇಲೆ ಹಲ್ಲೆ ನಡೆಸಿದ ಪ್ರಕರಣ ಸೇರಿದಂತೆ ವಿವಿಧ ಕಲಂಗಳ ಅಡಿ ಚಂದನ್ ವಿರುದ್ಧ ದೂರು ದಾಖಲಿಸಿದ್ದಾರೆ.

ಇದೀಗ ಚಂದನ್ 25 ಸಾವಿರ ರೂ. ಪಾವತಿಸಿ ನ್ಯಾಯಾಲಯದಿಂದ ಜಾಮೀನಿನ ಮೇಲೆ ಹೊರ ಬಂದಿದ್ದು, ಪ್ರಕರಣ ಇತ್ಯರ್ಥವಾಗುವವರೆಗೂ ಪ್ರತಿ ತಿಂಗಳು ಎರಡು ಬಾರಿ ತಿಲಕ್ ನಗರ ಪೊಲೀಸ್ ಠಾಣೆಗೆ ಹಾಜರಾಗಬೇಕಿದೆ.

Subscribe Newsletter

Get latest updates on your inbox...

Opinion Poll

  • ಕೇಂದ್ರದ ಬಿಜೆಪಿ ಸರ್ಕಾರ, ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧಿಗಳನ್ನು ಹಣಿಯುವ ದ್ವೇಷದ ರಾಜಕಾರಣ ಮಾಡುತ್ತಿದೆಯಾ?

    View Results

    Loading ... Loading ...